ಹಿಂದೂ ಧಾರ್ಮಿಕ ಗ್ರಂಥಗಳು ಅಶ್ಲೀಲ ಪಠ್ಯಗಳು : ಬಾಂಗ್ಲಾ ಪ್ರತಿಪಕ್ಷ ನಾಯಕ
ರಾಷ್ಟ್ರೀಯ ಚುನಾವಣೆಗಳ ಮುನ್ನ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಆರಂಭ
Team Udayavani, Jan 12, 2023, 3:38 PM IST
ನವದೆಹಲಿ : ಬಾಂಗ್ಲಾದೇಶದಲ್ಲಿ ನೆಲೆಸಿರುವ ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದಾಳಿಗಳ ಮಧ್ಯೆ, ಪ್ರತಿಪಕ್ಷದ ಉನ್ನತ ನಾಯಕ ಮತ್ತು ಗೊನೊ ಓಧಿಕಾರ್ ಪರಿಷತ್‌ನ ಜಂಟಿ ಸಂಚಾಲಕ ತಾರಿಕ್ ರೆಹಮಾನ್ ಅವರು “ಹಿಂದೂ ಧಾರ್ಮಿಕ ಗ್ರಂಥಗಳು ಕೇವಲ ಅಶ್ಲೀಲ ಪಠ್ಯಗಳು” ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.
ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಹಿಂದೂ ವಿಚಾರಗಳ ಮೇಲೆ ವಾಗ್ದಾಳಿ ನಡೆಸಿದ ತಾರಿಕ್ ರೆಹಮಾನ್, ಹಿಂದೂ ಧಾರ್ಮಿಕ ಗ್ರಂಥಗಳು ಯಾವುದೇ ನೈತಿಕ ಬೋಧನೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.
“ಹಿಂದೂ ಧರ್ಮದ ಧರ್ಮಗ್ರಂಥಗಳು ಯಾವುದೇ ನೈತಿಕ ಬೋಧನೆಗಳನ್ನು ನೀಡುವುದಿಲ್ಲ. ಎಲ್ಲಾ ಗ್ರಂಥಗಳು ಕೇವಲ ಅಶ್ಲೀಲ ಲಿಪಿಗಳು” ಎಂದು ತಾರಿಕ್ ರೆಹಮಾನ್ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಳಕೆದಾರರಿಂದ ವ್ಯಾಪಕವಾಗಿ ಶೇರ್ ಆಗುತ್ತಿದ್ದು ಆಕ್ರೋಶವೂ ವ್ಯಕ್ತವಾಗಿದೆ.
ಮುಂದಿನ ವರ್ಷದ ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ರಾಷ್ಟ್ರೀಯ ಚುನಾವಣೆಗಳು ನಡೆಯಲಿದ್ದು, ಜಮಾತ್-ಇ-ಇಸ್ಲಾಮಿ ಮತ್ತು ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿಯ ಬೆಂಬಲದೊಂದಿಗೆ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಲು ಪ್ರಾರಂಭಿಸಿದ್ದು,ಶೇಖ್ ಹಸೀನಾ ಸರ್ಕಾರ ಮತ್ತು ಹಿಂದೂ ಧರ್ಮದ ವಿರುದ್ಧ ಅಪಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.