ನಾಯಕತ್ವ ತ್ಯಜಿಸುವ ಕೊಹ್ಲಿ ನಿರ್ಧಾರ ವೈಯಕ್ತಿಕ: ಸೌರವ್ ಗಂಗೂಲಿ
Team Udayavani, Jan 16, 2022, 12:51 PM IST
ನವದೆಹಲಿ: ವಿರಾಟ್ ಕೊಹ್ಲಿ ಅವರು ಭಾರತ ತಂಡದ ನಾಯಕರಾಗಿದ್ದ ಅವಧಿಯಲ್ಲಿ ತಂಡವನ್ನು ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಮುನ್ನಡೆಸಿದ್ದಕ್ಕಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶ್ಲಾಘಿಸಿದ್ದಾರೆ, ಆದರೆ ಟೆಸ್ಟ್ ನಾಯಕತ್ವ ತ್ಯಜಿಸುವ ಅವರ ನಿರ್ಧಾರ ವೈಯಕ್ತಿಕವಾಗಿದೆ ಎಂದಿದ್ದಾರೆ.
“ವಿರಾಟ್ ನಾಯಕತ್ವದಲ್ಲಿ ಭಾರತೀಯ ಕ್ರಿಕೆಟ್ ಆಟದ ಎಲ್ಲಾ ಸ್ವರೂಪಗಳಲ್ಲಿ ಕ್ಷಿಪ್ರ ದಾಪುಗಾಲುಗಳನ್ನುಇಟ್ಟಿದೆ. ಅವರ ನಿರ್ಧಾರವು ವೈಯಕ್ತಿಕವಾಗಿದೆ ಮತ್ತು ಬಿಸಿಸಿಐ ಅದನ್ನು ಅಪಾರವಾಗಿ ಗೌರವಿಸುತ್ತದೆ.. ಭವಿಷ್ಯದಲ್ಲಿ ಈ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಅವರು ಪ್ರಮುಖ ಸದಸ್ಯರಾಗಿದ್ದಾರೆ. ಆಟಗಾರನಾಗಿ ಚೆನ್ನಾಗಿ ಆಡಿದ್ದಾರೆ” ಎಂದು ಗಂಗೂಲಿ ಟ್ವೀಟ್ ಮಾಡಿದ್ದಾರೆ.
Under Virats leadership Indian cricket has made rapid strides in all formats of the game ..his decision is a personal one and bcci respects it immensely ..he will be an important member to take this team to newer heights in the future.A great player.well done ..@BCCI @imVkohli
— Sourav Ganguly (@SGanguly99) January 15, 2022
ದಕ್ಷಿಣ ಆಫ್ರಿಕಾ ವಿರುದ್ಧದ ಅನಿರೀಕ್ಷಿತ 1-2 ಸರಣಿಯ ಸೋಲಿನ ಒಂದು ದಿನದ ನಂತರ ಕೊಹ್ಲಿ ಶನಿವಾರ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನಾಗಿ ಏಳು ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಭಾರತವು 68 ಟೆಸ್ಟ್‌ಗಳಲ್ಲಿ 40 ಪಂದ್ಯಗಳನ್ನು ಗೆದ್ದು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಸ್ಮರಣೀಯ ಸರಣಿಗಳನ್ನು ಜಯಿಸಿತ್ತು.
ಕೊಹ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಾಗಿದ್ದರೆ, ಎಂಎಸ್ ಧೋನಿ 60 ಪಂದ್ಯಗಳಲ್ಲಿ 27 ವಿಜಯಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಗಂಗೂಲಿ 21 ಗೆಲುವಿನೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ (53) ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ (48) ಮತ್ತು ಸ್ಟೀವ್ ವಾ (41) ನಂತರ ಟೆಸ್ಟ್ ನಾಯಕನಾಗಿ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
2014 ರಲ್ಲಿ ಆಸ್ಟ್ರೇಲಿಯ ವಿರುದ್ಧದ ಸರಣಿಯ ಮಧ್ಯದಲ್ಲಿ ಧೋನಿ ಕೆಳಗಿಳಿದ ನಂತರ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವ ಪಡೆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.