ಮತಗಟ್ಟೆಗಳಲ್ಲಿ ಧ್ವಜಾರೋಹಣ
Team Udayavani, Apr 30, 2023, 6:30 AM IST
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮತದಾನಕ್ಕೆ ದಿನಗಳು ಹತ್ತಿರವಾಗುತ್ತಿರುವಂತೆ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ವಿನೂತನ ಪ್ರಯತ್ನಕ್ಕೆ ಮುಂದಾಗಿರುವ ಚುನಾವಣ ಆಯೋಗ ಎ. 30ರಂದು “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಎ. 30ರಂದು ಏಕಕಾಲಕಕ್ಕೆ ರಾಜ್ಯದ ಎಲ್ಲ 58 ಸಾವಿರ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬದ ರೀತಿಯಲ್ಲಿ ಧ್ವಜಾರೋಹಣ ಮಾಡಲಾಗುತ್ತದೆ.
ಮತದಾನದಲ್ಲಿ ಭಾಗವಹಿಸು ವುದು ಎಲ್ಲ ಮತದಾರರ ಸಾಮಾಜಿಕ ಹೊಣೆಗಾರಿಕೆ. ಪ್ರತಿ ಮತದಾರನು ತನ್ನ ಮತದ ಮೌಲ್ಯವನ್ನು ಅರಿತು ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ ಸದೃಢ ಹಾಗೂ ಬಲಿಷ್ಠ ದೇಶ ಕಟ್ಟುವಂತಾಗಲಿ ಎಂಬುದೇ ಚುನಾವಣ ಆಯೋಗದ ಆಶಯ. ಸಾರ್ವಜನಿಕರನ್ನು ಮತದಾನಕ್ಕೆ ಪ್ರೇರೇಪಿಸಲು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಆಯೋಗ ಹಮ್ಮಿಕೊಂಡಿದೆ. ಅದಕ್ಕೆ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮ ಹೊಸ ಸೇರ್ಪಡೆಯಾಗಿದೆ.
ಕಾರ್ಯಕ್ರಮದಂದು “ಪ್ರಜಾಪ್ರಭುತ್ವದ ಹಬ್ಬ – ಮೇ 10 ಮತದಾನ” ಎಂಬ ಧ್ಯೇಯವಾಕ್ಯ ಒಳಗೊಂಡಿರುವ ಬಾವುಟವನ್ನು ಮತಗಟ್ಟೆಯಲ್ಲಿ ಹಾರಿಸಲಾಗುತ್ತದೆ. ಮತದಾರರನ್ನು ಸೆಳೆಯಲು ಸ್ಥಳೀಯ ಜನಪದ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾಲ್ನಡಿಗೆ ಜಾಥಾ ಸಹಿತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.