ಹೋಳಿ ಬಣ್ಣದ ಬಲೂನು ಎಸೆತ : ಆಟೋ ಪಲ್ಟಿ; ಯುಪಿಯ ವಿಡಿಯೋ ವೈರಲ್
ಆಚರಿಸುವ ವಿಧಾನ ಯಾವುದು? ವ್ಯಾಪಕ ಆಕ್ರೋಶ
Team Udayavani, Mar 20, 2022, 2:14 PM IST
News and Video Courtesy : ANI
ಬಾಗ್‌ಪತ್ : ಹೋಳಿ ಸಂಭ್ರಮದ ವೇಳೆ ರಸ್ತೆಯ ಬದಿಯಲ್ಲಿ ನಿಂತ ವ್ಯಕ್ತಿಯೊಬ್ಬ ವೇಗವಾಗಿ ಚಲಿಸುತ್ತಿದ್ದ ಆಟೋವೊಂದರ ಮೇಲೆ ಬಣ್ಣದ ನೀರು ತುಂಬಿದ ಬಲೂನು ಎಸೆದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿದೆ. ಈ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶವೂ ವ್ಯಕ್ತವಾಗಿದೆ.
ಬಲೂನ್ ಎಸೆದು ಆಟೋ ಪಲ್ಟಿಯಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರು ವಿಡಿಯೋ ಪರಿಶೀಲಿಸಿ ತನಿಖೆ ನಡೆಸಿದ್ದಾರೆ. ಬಾಗ್‌ಪತ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಇಬ್ಬರು ಆಟೋ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಅನುಜ್ ಮಿಶ್ರಾ ಹೇಳಿದ್ದಾರೆ.
#WATCH उत्तर प्रदेश: एक वायरल वीडियो में बागपत में तेज़ रफ़्तार से आ रहा ऑटो पानी से भरा गुब्बारा लगने से पलटता दिख रहा है। pic.twitter.com/GtGT5lQhxv
— ANI_HindiNews (@AHindinews) March 20, 2022
ಬಣ್ಣದ ಬಲೂನ್ ಎಸೆದಿದ್ದರಿಂದ ಚಾಲಕನಿಗೆ ಆಟೋದ ಗಾಜು ನೋಡಲು ಸಾಧ್ಯವಾಗದೆ, ಅತಿವೇಗದ ಆಟೋ ಚಾಲಕ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಆಚರಿಸುವ ವಿಧಾನ ಯಾವುದು? ಯಾರು ಯಾವ ಉದ್ದೇಶಕ್ಕಾಗಿ ಎಲ್ಲಿಗೆ ಹೋಗುತ್ತಿದ್ದಾರೆ ಮತ್ತು ನೀವು ಯೋಚಿಸದೆ ಬಣ್ಣ, ನೀರು, ದನದ ಸಗಣಿ ಎರಚುವುದು ಸರಿಯಲ್ಲ. ಬಲೂನ್ ಗಳನ್ನು ನಿಷೇಧಿಸಬೇಕು, ಯಾರ ಮೇಲೂ ಬಲೂನ್ ಊದುವುದು ಸರಿಯಲ್ಲ ಎಂದು ಹಲವಾರು ಮಂದಿ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.