“ಹುಬ್ಬಳ್ಳಿ ಜಯದೇವ ಆಸ್ಪತ್ರೆ’: ಜ.12ಕ್ಕೆ ಪ್ರಧಾನಿಯಿಂದ ಶಂಕುಸ್ಥಾಪನೆ ಸಾಧ್ಯತೆ
Team Udayavani, Dec 25, 2022, 6:25 AM IST
ಬೆಂಗಳೂರು: ಕಿತ್ತೂರು ಕರ್ನಾಟಕ ಭಾಗದ ಬಹುನಿರೀಕ್ಷಿತ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 2023ರ ಜ.12ಕ್ಕೆ ಶಂಕು ಸ್ಥಾಪನೆ ನೆರವೇರಿಸುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನಸಿನ ಕೂಸಾಗಿರುವ ಹುಬ್ಬಳ್ಳಿ ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿದ್ದು 2022-23ರ ರಾಜ್ಯ ಬಜೆಟ್‌ನಲ್ಲಿ 250 ಕೋಟಿ ರೂ. ಘೋಷಿಸಲಾಗಿತ್ತು.
ಈ ಹಿಂದೆಯೇ ಹಲವು ಬಾರಿ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆಗೆ ಸರ್ಕಾರ ಮುಂದಾಗಿದ್ದರೂ, ಕೆಲ ಆಡಳಿತಾತ್ಮಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಅಂತಿಮವಾಗಿ ಪ್ರಧಾನಿ ಮೋದಿ ಜನವರಿಯಲ್ಲಿ ರಾಜ್ಯಕ್ಕೆ ಆಗಮಿಸಿ ಹಲವು ಯೋಜನೆಗಳಿಗೆ ಚಾಲನೆ ನೀಡಲು ಸಮಯ ನಿಗದಿಪಡಿಸಲಾಗಿದ್ದು, ಅವುಗಳ ಪೈಕಿ ಹುಬ್ಬಳ್ಳಿ ಜಯದೇವ ಆಸ್ಪತ್ರೆ ಶಂಕುಸ್ಥಾಪನಾ ಕಾರ್ಯಕ್ರಮವೂ ಸೇರಿದೆ ಎಂದು ಜಯದೇವ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ಪ್ರಾರಂಭವಾಗುವುದರಿಂದ ಉತ್ತರ ಕರ್ನಾಟಕದ ಲಕ್ಷಾಂತರ ಮಂದಿಗೆ ನೆರವಾಗಲಿದೆ. ಹೃದ್ರೋಗ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ತಜ್ಞ ವೈದ್ಯರು, ಸುಸಜ್ಜಿತ ಸೌಲಭ್ಯಗಳು ಇರಲಿವೆ ಎಂದು ಹೇಳಿದ್ದಾರೆ.
435 ಸುಸಜ್ಜಿತ ಬೆಡ್ ವ್ಯವಸ್ಥೆ:
ಕರ್ನಾಟಕದಲ್ಲಿ ಪ್ರತಿ ವರ್ಷ ಅಂದಾಜು 25 ಸಾವಿರಕ್ಕೂ ಅಧಿಕ ಹೃದ್ರೋಗಿಗಳು ಚಿಕಿತ್ಸೆ ಅರಸಿ ಬೆಂಗಳೂರಿನ ಜಯದೇವ ಹಾಗೂ ಖಾಸಗಿ ಹೃದ್ರೋಗ ಆಸ್ಪತ್ರೆಗಳ ಕದ ತಟ್ಟುತ್ತಿದ್ದಾರೆ. ಹೃದಯ ಸಂಬಂಧಿ ಕಾಯಿಲೆ ಯಿಂದ ಬಳಲುತ್ತಿರುವ ಉತ್ತರ ಕರ್ನಾಟಕ ಭಾಗದ ಬಡವರು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಹೋಗಿ ಬರುವುದೇ ದೊಡ್ಡ ಸಮಸ್ಯೆಯಾಗಿತ್ತು. ಹೀಗಾಗಿ, ಹುಬ್ಬಳ್ಳಿಯಲ್ಲಿ ಒಂಬತ್ತೂವರೆ ಎಕರೆ ವಿಶಾಲವಾದ ಪ್ರದೇಶದಲ್ಲಿ ತಲೆ ಎತ್ತುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 435 ಬೆಡ್ ವ್ಯವಸ್ಥೆ, 100 ಐಸಿಯು, ಸಿ.ಟಿ. ಹಾಗೂ ಎಂಆರ್‌ಐ ಸ್ಕ್ಯಾನ್ ಸೌಲಭ್ಯ, ನ್ಯೂಕ್ಲಿಯರ್ ಕಾರ್ಡಿಯಾಲಜಿ ಸೇವೆ, ಪ್ರಯೋಗಾಲಯ, ಸಾಮಾನ್ಯ ವಾರ್ಡ್‌ಗಳು, ವಿಶೇಷ ವಾರ್ಡ್‌ಗಳು, ಸಾಮಾನ್ಯ ಹೊರರೋಗಿ ವಿಭಾಗ ಸೇರಿ ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿರುವ ಎಲ್ಲ ಸುಸಜ್ಜಿತ ವ್ಯವಸ್ಥೆಗಳೂ ಲಭ್ಯವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.