ಹುಬ್ಬಳ್ಳಿ ಹಾಡಹಗಲೇ ಅಪರಿಚಿತರಿಂದ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ!
Team Udayavani, Aug 6, 2020, 7:18 PM IST
ಹುಬ್ಬಳ್ಳಿ: ಹಳೇ ಹಬ್ಬಳ್ಳಿಯ ದೇವರ ಗುಡಿಹಾಳ ರಸ್ತೆಯ ಅಲ್ ತಾಜ್ ರೆಸ್ಟೂರೆಂಟ್ ಮುಂಭಾಗದಲ್ಲಿ ಅಪರಿಚಿತರಿಂದ ವ್ಯಕ್ತಿಯೋರ್ವನ ಮೇಲೆ ಗುಂಡಿನ ದಾಳಿ ನಡೆದಿದ್ದು, ಆರು ಜನ ಮೂರು ಬೈಕ್ ಗಳಲ್ಲಿ ಬಂದು ಕೃತ್ಯ ನಡೆಸಿದ್ದಾರೆ.
ಗುಂಡಿನ ದಾಳಿಗೆ ಒಳಗಾದ ವ್ಯಕ್ತಿಯನ್ನು ರೌಡಿಶೀಟರ್ ಫ್ರೂಟ್ ಇರ್ಫಾನ್ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇರ್ಫಾನ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಗುಂಡು ಹಣೆಗೆ ಇನ್ನೊಂದು ತೊಡೆ ಭಾಗಕ್ಕೆ ಬಿದ್ದಿದೆ ಎನ್ನಲಾಗಿದೆ.
ಮಗನ ಮದುವೆ ಸಮಾರಂಭ ನಡೆಯುತ್ತಿದ್ದ ಹಾಲ್ ಮುಂಭಾಗದಲ್ಲಿಯೇ ಘಟನೆ ನಡೆದಿದೆ. ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಹಾರಿಸುತ್ತಿದ್ದಂತೆ ಮೂರು ಬೈಕ್ ಗಳಲ್ಲಿ ಆಗಮಿಸಿದವರು ಪರಾರಿಯಾಗಿದ್ದಾರೆ. ಕೂಡಲೇ ಸಂಬಂಧಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಿಸಿ ಕ್ಯಾಮೆರಾದಲ್ಲಿ ದಾಖಲು: ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ಗುಂಡು ಹಾರಿಸಿದ್ದು, ಹೊಟೇಲ್ ನ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಸಂಬಂಧಿಕರನ್ನು ಕಾರಿಗೆ ಹತ್ತಿಸುತ್ತಿದ್ದ ವೇಳೆ ಗುಂಡಿನ ದಾಳಿ ಮಾಡಿ ಬೈಕ್ ಮೂಲಕ ಪರಾರಿಯಾಗಿದ್ದಾರೆ.
ಸಜೀವ ಗುಂಡು ಪತ್ತೆ: ಘಟನೆ ನಡೆದ ಸ್ಥಳದಲ್ಲಿ ಸಜೀವ ಗುಂಡು ಪತ್ತೆಯಾಗಿದೆ. ಇನ್ನೊಂದು ಕಡೆ ಹಾರಿಸಿದ ಗುಂಡಿನ ಎಮ್ಟಿ ಕೇಸ್ ಪತ್ತೆಯಾಗಿದೆ. ಸ್ಥಳದಲ್ಲಿ ಹಳೇ ಹುಬ್ಬಳ್ಳಿ ಪೊಲೀಸರು ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.