ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಪ್ರಮಾಣದ ತ್ಯಾಜ್ಯ ರಾಶಿ ;ಪಾದಯಾತ್ರೆ ಪರಿಣಾಮ
Team Udayavani, Feb 18, 2023, 7:32 PM IST
ಕೊಟ್ಟಿಗೆಹಾರ: ಮಹಾಶಿವರಾತ್ರಿ ಹಿನ್ನಲೆಯಲ್ಲಿ ಧರ್ಮಸ್ಥಳಕ್ಕೆ ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಮಾರ್ಗವಾಗಿ ಸಾವಿರಾರು ಭಕ್ತರು ಪಾದಯಾತ್ರೆಯಲ್ಲಿ ಸಾಗಿದ್ದು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗಿದೆ.
ಚಾರ್ಮಾಡಿ ಘಾಟ್‌ನಲ್ಲಿ ಭಕ್ತಾಗಳಿಗೆ ದಾನಿಗಳು ಅನ್ನದಾನ, ಕಲ್ಲಂಗಡಿ ಮುಂತಾದವುಗಳನ್ನು ನೀಡಿದ್ದು ಇದರ ಪರಿಣಾಮ ರಸ್ತೆ ಉದ್ದಕ್ಕೂ ಪ್ಲಾಸ್ಟಿಕ್ ತಟ್ಟೆ,ಪ್ಲಾಸ್ಟಿಕ್ ಲೋಟ, ನೀರಿನ ಬಾಟಲಿಗಳು ರಾಶಿ ಬಿದ್ದಿವೆ. ಚಾರ್ಮಾಡಿ ಘಾಟ್ ಉದ್ದಕ್ಕೂ ಕಸದ ಚೀಲಗಳನ್ನು ಅಳವಡಿಸಿದರೂ ಕೂಡ ತ್ಯಾಜ್ಯವನ್ನು ಕಸದ ಚೀಲಕ್ಕೆ ಹಾಕದೇ ಎಲ್ಲೆಂದರಲ್ಲಿ ಎಸೆದ ಪರಿಣಾಮ ತ್ಯಾಜ್ಯ ರಾಶಿ ರಸ್ತೆ ಬದಿಯ ಅರಣ್ಯ ಪ್ರದೇಶವನ್ನು ಸೇರುತ್ತಿದೆ.
ಚಾರ್ಮಾಡಿ ಘಾಟ್ ಮೂಲಕ ಹರಿದು ನೇತ್ರಾವತಿ ನದಿಯನ್ನು ಸೇರುವ ತೊರೆಗಳಿಗೂ ಪ್ಲಾಸ್ಟಿಕ್ ಮುಂತಾದ ತ್ಯಾಜ್ಯ ಸೇರಿವೆ. ವನ್ಯಮೃಗಗಳು ಪ್ಲಾಸ್ಟಿಕ್ ಲೋಟ, ತಟ್ಟೆಗಳಲ್ಲಿರುವ ಆಹಾರ ತ್ಯಾಜ್ಯಗಳನ್ನು ತಿನ್ನುತ್ತಿದ್ದು ಪ್ಲಾಸ್ಟಿಕ್ ವನ್ಯಮೃಗಗಳ ಹೊಟ್ಟೆ ಸೇರುತ್ತಿದೆ.
ಈ ವರ್ಷ ಪಾದಯಾತ್ರೆ ಪ್ರಾರಂಭವಾಗುವ ಮುಂಚಿತವಾಗಿಯೇ ಸ್ವಚ್ಛತೆ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕೈಗೊಂಡಿದ್ದು ಭಕ್ತಾಗಳ ನಿರ್ಲಕ್ಷö್ಯದಿಂದಾಗಿ ಸ್ವಚ್ಛತೆ ಕಾಪಾಡುವುದೇ ಸವಾಲಾಗಿ ಪರಿಣಮಿಸಿದೆ.
ತಂಡಗಳ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಿ ಕಾರ್ಯಾಚರಣೆ ನಡೆಸಿ ಸ್ವಚ್ಛತೆ ನಿರ್ವಹಣೆ ಮಾಡಲಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ದಾನಿಗಳು ಊಟ, ಹಣ್ಣು ವಿತರಣೆ ಮಾಡಿ ತ್ಯಾಜ್ಯ ವಿಲೇವಾರಿಯನ್ನು ಮಾಡದೇ ಇರುವುದರಿಂದ ತ್ಯಾಜ್ಯ ಸಂಗ್ರಹವಾಗಿದೆ. ಮುಂದಿನ ವರ್ಷ ನಿರ್ದಿಷ್ಟ ಸ್ಥಳದಲ್ಲಿ ಊಟ ಉಪಹಾರ ಮುಂತಾದವುಗಳ ವಿತರಣೆಗೆ ಅವಕಾಶ ಮಾಡಿಕೊಡಲಾಗುವುದು
-ಹರ್ಷಕುಮಾರ್, ತಾಲ್ಲೂಕು ಕಾರ್ಯ ನಿರ್ವಾಹಣಾಕಾರಿ ಮೂಡಿಗೆರೆ
ಪಾದಯಾತ್ರೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧ ವಿಸಬೇಕು. ಈ ಬಾರಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಅತ್ಯಂತ ವ್ಯವಸ್ಥಿತವಾಗಿ ಸ್ವಚ್ಛತೆ ನಿರ್ವಹಣೆಗೆ ಕ್ರಮ ಕೈಗೊಂಡಿದೆ. ಆದರೆ ಪಾದಯಾತ್ರಿಗಳು ಕೂಡ ಸ್ವಚ್ಛತೆ ಕಾಪಾಡಲು ಸಹಕಾರ ನೀಡಬೇಕು
-ಸಾಗರ್ ತರುವೆ, ಗ್ರಾಮಸ್ಥರು
ಸಂತೋಷ್ ಅತ್ತಿಗೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.