Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
ಸಮುದಾಯದಲ್ಲಿ ಡೆಂಗ್ಯೂ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಅಧಿಕಾರಿ ನಾಗೇಂದ್ರ
Team Udayavani, Jul 4, 2024, 7:19 PM IST
ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದಾರೆ.
ಡೆಂಗ್ಯೂ ವಿರುದ್ಧವೇ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿದ್ದ ಅಧಿಕಾರಿಯೇ ಮೃತಪಟ್ಟಿದ್ದಾರೆ ಎಂಬುದು ವಿಪರ್ಯಾಸ. ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನಾಗೇಂದ್ರ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ತೀವ್ರ ನಿಗಾ ಘಟಕದಲ್ಲಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಆಸ್ಪತ್ರೆಗೆ ಡಿಎಚ್‌ಒ ಡಾ.ಕುಮಾರಸ್ವಾಮಿ, ಜಿಲ್ಲಾ ಸರ್ವೆಕ್ಷಣಾಧಿಕಾರಿ ತಾಲೂಕು ಆರೋಗ್ಯಾಧಿಕಾರಿ ಡಾ.ಮಹದೇವ ಪ್ರಸಾದ್, ಟಿಎಚ್‌ಒ ಡಾ.ಕೀರ್ತಿಕುಮಾರ್ ಸೇರಿ ತಾಲೂಕಿನ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!
MUST WATCH
ಹೊಸ ಸೇರ್ಪಡೆ
ತಹಶೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ
Sydney Thunder: ಡೇವಿಡ್ ವಾರ್ನರ್‌ಗೆ 6 ವರ್ಷಗಳ ಬಳಿಕ ನಾಯಕತ್ವ!
LMV ಲೈಸನ್ಸ್ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ
Jammu and Kashmir Assembly: ಕಾಶ್ಮೀರ ವಿಶೇಷ ಸ್ಥಾನಮಾನ ಕೋರಿ ಅಸೆಂಬ್ಲಿಯಲ್ಲಿ ಗಲಾಟೆ
Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.