ದೈತ್ಯ ಅಳಿಲು, ಹಾರುವ ಅಳಿಲುಗಳ ಬೇಟೆ: ಆರೋಪಿಗಳು ಪರಾರಿ
Team Udayavani, Jul 12, 2023, 12:10 AM IST
ಅರಂತೋಡು/ ಮಡಿಕೇರಿ: ಸಂಪಾಜೆ ವಲಯದ ಡಬ್ಬಡ್ಕ ಪಟ್ಟಿ ಘಾಟಿ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿನಾಶದಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸಿದ ಪ್ರಕರಣವನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಬಯಲಿಗೆಳೆದಿದೆ.
ವನ್ಯ ಜೀವಿಗಳನ್ನು ಕೆಲವರು ಬೇಟೆಯಾಡಿರುವ ಬಗ್ಗೆ ಸಂಪಾಜೆ ವಲಯ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತ್ತು. ಅದರಂತೆ ಆರೋಪಿಗಳಾದ ದಬ್ಬಡ್ಕ ಗ್ರಾಮದ ಮದನ್ ಕುಮಾರ್ (38), ಗಣಪತಿ ಬಿನ್ ಮಾಚಯ್ಯ (50) ಹಾಗೂ ಪ್ರಸನ್ನ ಕುಮಾರ್ (35) ಅವರ ಮನೆಗಳ ಮೇಲೆ ಅರಣ್ಯ ಇಲಾಖೆ ಸಿಬಂದಿ ದಾಳಿ ನಡೆಸಿದರು. ಈ ಸಂದರ್ಭ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಮನೆಯಲ್ಲಿದ್ದ 2 ವನ್ಯಜೀವಿಗಳ ಮಾಂಸವನ್ನು ಪಾತ್ರೆ ಸಹಿತ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಮತು ವಲಯ ಅರಣ್ಯಾಧಿಕಾರಿ ಮಧುಸೂದನ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ನಿಸಾರ್ ಮಹಮ್ಮದ್, ಗಸ್ತು ಅರಣ್ಯ ಪಾಲಕರಾದ ಚಂದ್ರಪ್ಪ, ಕಾರ್ತಿಕ್, ಮನೋಜ್ ಕುಮಾರ್, ದುರ್ಗಾಪ್ರಸಾದ್, ಗಗನ್, ಶರತ್, ಶಂಕರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.