ಯಡಿಯೂರಪ್ಪ ಸಿಎಂ ಆಗಲು ಮೂಲ ಕಾರಣ ನಾನು: ಗಾಲಿ ಜನಾರ್ದನ ರೆಡ್ಡಿ
ನನ್ನನ್ನು ರಾಜಕೀಯದಿಂದ ಹತ್ತಿಕ್ಕುವ ಪ್ರಯತ್ನಕ್ಕೆ ಉತ್ತರ ನೀಡುವ ಸಮಯ ಬಂದಿದೆ
Team Udayavani, Mar 8, 2023, 5:09 PM IST
ಕನಕಗಿರಿ: ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ, ಜನಾರ್ದನ ರೆಡ್ಡಿಯನ್ನು ರಾಜಕೀಯ ಕ್ಷೇತ್ರದಿಂದ ಹತ್ತಿಕ್ಕಲು ಪ್ರಯತ್ನಿಸುವವರಿಗೆ ಉತ್ತರ ನೀಡುವ ಸಮಯ ಬಂದಿದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಅವರು ಪಟ್ಟಣದ ಉತ್ಸವ ಮೈದಾನದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದ ಜೊತೆಗೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಮೂಲ ಕಾರಣ ನಾನು. ಕೆಲ ವಿರೋಧಿಗಳು ನನ್ನ ಬೆಳವಣಿಗೆ ಸಹಿಸಲಾಗದೆ ಇಲ್ಲಸಲ್ಲದ ಆರೋಪಗಳನ್ನು ನನ್ನ ಮೇಲೆ ಇರಿಸಿ ಬಂಧನಕ್ಕೆ ಒಳಪಡಿಸಿದರು.ನನಗೆ ಸುಮಾರು ಕಷ್ಟಗಳು ಬಂದರೂ ಜನರ ಸೇವೆ ಮಾಡುವ ಮೂಲಕ ತೃಪ್ತಿ ಪಡುತ್ತೇನೆ. ರಾಜ್ಯದಲ್ಲಿ ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸುವ ಮೂಲಕ ಜನರ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ನಮ್ಮ ಪಕ್ಷಕ್ಕೆ ರಾಜ್ಯದ ಜನತೆಯಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು 31 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದರ ಜೊತೆಗೆ 25 ರಿಂದ 30 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದಾರೆ. ನಾನು ಸಂಪೂರ್ಣವಾಗಿ ಬಹುಮತ ಹೊಂದದೆ ಇದ್ದರೂ ಉತ್ತಮವಾದ ಆಡಳಿತ ನೀಡುವ ಸರಕಾರದ ಜೊತೆ ಕೈಗೂಡಿಸುವ ನಿಟ್ಟಿನಲ್ಲಿ ಜನರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.
ಕನಕಗಿರಿ ಕ್ಷೇತ್ರದಲ್ಲಿ ಒಬ್ಬ ನಾಯಕ ಕ್ಷೇತ್ರವನ್ನು ಅಭಿವೃದ್ದಿ ಪಡಿಸದೆ ಆರೋಪಗಳಲ್ಲಿ ಸಿಲುಕಿ ವಿಡಿಯೋ ಗಳಲ್ಲಿ ರಾಜ್ಯಂದ್ಯಂತ ಪ್ರಚಾರವಾಗಿದ್ದಾರೆ. ಇನ್ನೊಬ್ಬರನ್ನು ನಾನೇ ರಾಜಕೀಯವಾಗಿ ಬೆಳೆಸಿದರು ಈಗಾಗಲೇ ಅವರ ದರ್ಪ ಜನರಿಗೆ ಬೇಸರವಾಗಿದೆ. ವಿದ್ಯಾವಂತ ಕೆಆರ್‌ಪಿಪಿ ಪಕ್ಷದ ಚಾರುಲ್ ವೆಂಕಟರಮಣ ದಾಸರಿಯನ್ನು ಭಾರಿ ಅಂತರದಿಂದ ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದರು.
ಈ ಹಿಂದೆ ಪ್ರಾದೇಶಿಕ ಪಕ್ಷವನ್ನು ಕಟ್ಟಿದವರು ಅಧಿಕಾರ ಮಾಡುವಲ್ಲಿ ಯಶಸ್ವಿಯಾಗಿಲ್ಲ ಜನಾರ್ದನ ರೆಡ್ಡಿ ಯಾವ ಲೆಕ್ಕ ಎನ್ನುವವರಿಗೆ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಉತ್ತರ ಸಿಗಲಿದೆ. ರಾಜ್ಯ ದೇಶದ ಉದ್ದಗಲ್ಲಕ್ಕೂ ಸಂಚರಿಸಿ ಪಕ್ಷವನ್ನು ಸಂಘಟಿಸುವ ಬೆಳೆಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವಲ್ಲಿ ಯಶಸ್ವಿಯಾಗುತ್ತೇನೆ ಎಂಬ ವಿಶ್ವಾಸವಿದೆ ಎಂದರು.
ಪಕ್ಷದ ಪ್ರಣಾಳಿಕೆ ಯೋಜನೆ ಬಿಡುಗಡೆ
ರಾಜ್ಯದ ಪ್ರತಿ ಗ್ರಾಮಗಳಲ್ಲಿ ಬಸವೇಶ್ವರ ರೈತ ಕೇಂದ್ರಗಳನ್ನು ತೆರೆದು ಗ್ರಾಮದ ರೈತರ ಸಮಸ್ಯೆಗಳನ್ನು ಪಟ್ಟಿ ಮಾಡಿ ಉಚಿತ ರಸಗೊಬ್ಬರ, ಬೀಜಗಳನ್ನು ನೀಡಲಾಗುತ್ತದೆ. ಅಲ್ಲದೆ 5 ಲಕ್ಷ ಬಡ್ಡಿ ರಹಿತ ಸಾಲಗಳನ್ನು ನೀಡುವುದು. ೫ ಎಕರೆ ಒಳಗೆ ಭೂಮಿ ಹೊಂದಿದ ರೈತನಿಗೆ ತಿಂಗಳಿಗೆ 15000 ಹಣ ಖಾತೆಗೆ ಜಮಾ ಮಾಡಲಾಗುವುದು.
ಒನಕೆ ಓಬವ್ವ ಸ್ವಾಭಿಮಾನ ಯೋಜನೆ: ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸಮಾನ ವೇತನ, ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಉಚಿತ ಪ್ರಯಾಣ, ಮಹಿಳಾ ಭದ್ರತೆಗೆ ಮಹಿಳಾ ಪೋಲಿಸ್ ಠಾಣೆ ನಿರ್ಮಾಣ.
ಕಿತ್ತೂರು ರಾಣಿ ಚೆನ್ನಮ್ಮ ಅಭಯಾಸ್ತ ಯೋಜನೆ : ಬಡತನ ರೇಖೆ ಕೆಳಗಿರುವ ಕಟುಂಬದ ಗೃಹಿಣಿಯರಿಗೆ ತಲಾ 2000 ಖಾತೆಗೆ ಜಮಾ ಮಾಡಲಾಗುವುದು.
ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಚಾರುಲ್ ವೆಂಕಟರಮಣ ದಾಸರಿ, ಕೆಆರ್‌ಪಿಪಿ ಪಕ್ಷದ ಜಿಲ್ಲಾಧ್ಯಕ್ಷ ಮನೋಹರ ಗೌಡ, ರಾಜ್ಯ ಮಹಿಳಾ ಶಕ್ತಿ ಕೇಂದ್ರ ಅಧ್ಯಕ್ಷೆ ಹೇಮಲತಾ ಮಾತನಾಡಿದರು.ಈ ವೇಳೆಯಲ್ಲಿ ಕನಕಗಿರಿ ಕಾರಟಗಿ ತಾಲೂಕಿನಲ್ಲಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ವಿರುಪಾಕ್ಷಗೌಡ ಹೇರೂರು, ಕೆಆರ್‌ಪಿಪಿ ಮಹಿಳಾ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚನ್ನವೀರನಗೌಡ, ಜಿಲ್ಲಾ ವಕ್ತಾರ ಸಂಗಮೇಶ, ಯುವ ಮುಂದಾಳು ಚನ್ನಪ್ಪ ತೆಗ್ಗಿನಮನಿ, ಪ್ರಮುಖರಾದ ವಿರುಪನಗೌಡ ಹೇರೂರು, ಜಿಲಾನಿಭಾಷ, ಶಿವು ಸಜ್ಜನ, ಮಹೇಶ ಹಾದಿಮನಿ, ನಾಗರಾಜ ಬಾವಿಕಟ್ಟಿ, ಕರಿಬಸಪ್ಪ, ನಾಗರಾಜ, ರಮೇಶ ರ‍್ಯಾರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.