ಅಲ್ ಜವಾಹಿರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ: ಎಸ್.ಎ.ಹುಸೇನ್
ವಿದೇಶಿ ಫ್ಯಾಸಿಸ್ಟ್ ಸಂಘಟನೆಯಿಂದ ಯಾವುದೇ ಸಲಹೆ ಪಡೆಯುವ ಅಗತ್ಯ ಇಲ್ಲ
Team Udayavani, Apr 8, 2022, 12:39 PM IST
ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಭಾರತೀಯ ಮುಸ್ಲಿಮರು ಒಂದಾಗಬೇಕು ಎಂದು ಅಲ್ ಖೈದಾ ಮುಖ್ಯಸ್ಥ ಅಯ್ಮನ್ ಅಲ್ ಜವಾಹಿರಿ ನೀಡಿರುವ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಎ.ಹುಸೇನ್ ಹೇಳಿದ್ದಾರೆ.
ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಪ್ರಜಾಪ್ರಭುತ್ವ ರಾಷ್ಟ್ರ. ಶಾಲೆಯಲ್ಲಿ ಪಠ್ಯಕ್ರಮ, ಪ್ರಾರ್ಥನೆ, ತತ್ವಶಾಸ್ತ್ರ, ಸಿದ್ಧಾಂತ ಮತ್ತು ಸಮವಸ್ತ್ರವನ್ನು ಆಯ್ಕೆ ಮಾಡಿಕೊಳ್ಳುವುದು ಪ್ರತಿ ಶಿಕ್ಷಣ ಸಂಸ್ಥೆಯ ಮೂಲಭೂತ ಹಕ್ಕು ಎಂಬ ಸತ್ಯವನ್ನು ಒಟ್ಟಾರೆಯಾಗಿ ಮುಸ್ಲಿಂ ಸಮುದಾಯ ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮುಸ್ಲಿಮರು ಮತ್ತು ಹಿಂದೂಗಳ ನಡುವೆ ಕೆಲವು ಫ್ಯಾಸಿಸ್ಟ್ ಶಕ್ತಿಗಳು ರಾಜಕೀಯ ಲಾಭಕ್ಕಾಗಿ ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಷ್ಟ್ರದ ಸಾಮಾಜಿಕ ಮತ್ತು ಜಾತ್ಯತೀತ ಸಂರಚನೆಗೆ ಭಂಗ ತರಲು ಪ್ರಯತ್ನಿಸುತ್ತಿವೆ. ಭಾರತದ ಸಾಮರಸ್ಯ ಕಾಪಾಡಲು ನಾವೆಲ್ಲರೂ ಬದ್ಧರಿದ್ದೇವೆ. ಆದರೆ ನಮಗೆ ಇನ್ನೊಂದು ವಿದೇಶಿ ಫ್ಯಾಸಿಸ್ಟ್ ಸಂಘಟನೆಯಿಂದ ಯಾವುದೇ ಸಲಹೆ ಪಡೆಯುವ ಅಗತ್ಯ ಹಾಗೂ ಅನಿವಾರ್ಯತೆ ಇಲ್ಲ. ಅಲ್ ಜವಾಹಿರಿ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.