![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jan 27, 2023, 7:45 PM IST
ವಿಜಯಪುರ : ಸುಳ್ಳು ದೂರು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಲೋಕಾಯುಕ್ತಕ್ಕಿದೆ. ಹೀಗಾಗಿ ಪ್ರಾಮಾಣಿಕ ಅಧಿಕಾರಿಗಳು ಸುಳ್ಳು ದೂರುಗಳಿಗೆ ಹೆದರುಸವ ಅಗತ್ಯವಿಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಭಯ ನೀಡಿದ್ದಾರೆ.
ಶುಕ್ರವಾರ ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಅಭಯ ನಿಡಿದ ಲೋಕಾಯುಕ್ತ ನ್ಯಾಯಮೂರ್ತಿಗಳು, ಸುಳ್ಳು ದೂರುಗಳಿಂದ ತಮ್ಮ ವ್ಯಕ್ತಿತ್ವಕ್ಕೆ, ಕರ್ತವ್ಯ ನಿರ್ವಹಣೆಯಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಅನೇಕ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಕಾನೂನಿನಲ್ಲಿ ಇರುವ ಅವಕಾಶದಂತೆ ಸುಳ್ಳು ದೂರು ನೀಡಿದವರ ಮೇಲೆಯೂ ಕ್ರಮ ಕೈಗೊಳ್ಳುವ ಅಧಿಕಾರ ಲೋಕಾಯಕ್ತಕ್ಕೆ ಇದೆ ಎಂದರು.
ಹೀಗಾಗಿ ಪ್ರಾಮಾಣಿಕ ಅಧಿಕಾರಿಗಳು ಸುಳ್ಳು ದೂರುಗಳಿಗೆ ಅನಗತ್ಯವಾಗಿ ಹೆದರುವ ಅಗತ್ಯವಿಲ್ಲ. ಕೆಲವು ವ್ಯಕ್ತಿಗಳು ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ದೂರು ನೀಡುತ್ತಿರುವ ವಿಷಯ ನಮ್ಮ ಗಮನಕ್ಕಿದೆ. ಹೀಗಾಗಿ ಸುಳ್ಳು ಪ್ರಕರಣ ದಾಖಲಿಸುವ ಕುರಿತು ನಮಗೆ ದೂರುಗಳು ಬಂದರೆ ಆಯಾ ಅಧಿಕಾರಿ ಪೂರ್ವಾಪರ, ಮೇಲಾಧಿಕಾರಿಗಳಿಂದ ಅಭಿಪ್ರಾಯ, ಸಹೋದ್ಯೋಗಿಗಳಿಂದ ಮಾಹಿತಿ ಸಂಗ್ರಹಿಸಿ, ಪ್ರಾಮಾಣಿಕ ಅಧಿಕಾರಿಗಳ ರಕ್ಷಣೆ ನಿಲ್ಲುತ್ತೇವೆ, ನಿರ್ಭಯವಾಗಿರಿ ಎಂದರು.
ಇದಲ್ಲದೇ ಭ್ರಷ್ಟಾಚಾರದಲ್ಲಿ ತೊಡಗಿರುವ ಯಾವುದೇ ರೀತಿಯ ಪ್ರಭಾವಿ ರಾಜಕಾರಣಿ, ದೊಡ್ಡ ಅಧಿಕಾರಿ ಇದ್ದರೂ ದಾಖಲೆ ಸಮೇತ ದೂರು ನೀಡಲು ಸಾರ್ವಜನಿಕರು ಹಿಂಜರಿಯಬಾರದು. ಅಗತ್ಯ ಎನಿಸಿದಲ್ಲಿ ದೂರುದಾರರಿಗೆ ಯಾವ ಸಮಸ್ಯೆ ಆಗದಂತೆ ಲೋಕಾಯುಕ್ತದಿಂದ ಅಗತ್ಯ ರಕ್ಷಣೆ ಕಲ್ಪಿಸುವುದಾಗಿ ಭರವಸೆ ನೀಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಕೂಡಲೇ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡುವಂತೆ ಲೋಕಾಯುಕ್ತದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಸುಳ್ಳು ದಾಖಲೆಗಳೊಂದಿಗೆ ಮಕ್ಕಳ ಸಂಖ್ಯೆ ಹೆಚ್ಚಿಸಿ ಸರ್ಕಾರದ ಬೊಕ್ಕಸಕ್ಕೆ ಹೊರೆ ಹೇರುತ್ತಿರುವ ಕುರಿತು ದೂರುಗಳಿವೆ. ಹೀಗಾಗಿ ಈ ಕುರಿತು ಲೋಕಾಯುಕ್ತ ಇಲಾಖೆ ಅಧಿಕಾರಿಗಳು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ನಿಖರ ಸಂಖ್ಯೆ, ದಾಖಲಾತಿ ಪರಿಶೀಲನೆ ನಡೆಸಿ, ವ್ಯತ್ಯಾಸ ಕಂಡುಬಂದರೆ ಸಮಗ್ರ ವರದಿ ನೀಡಬೇಕು.
ಇದಲ್ಲದೇ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು. ಜೊತೆಗೆ ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿ, ವರದಿ ನೀಡಬೇಕು.
ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯನ್ನು ಪರಿಣಾಮಕಾರಿಯಾಗಿ ಮಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಹಾಜರಾತಿ ನಿರ್ವಹಣೆ, ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಔಷಧಿ ತಲುಪುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಲ ಕಾಲಕ್ಕೆ ಭೇಟಿ ನೀಡಿ ದಾಖಲಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ವಿವರಣೆ ನೀಡಿ, ಜಿಲ್ಲೆಯಲ್ಲಿ 63 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 6 ನಗರ ಆರೋಗ್ಯ ಕೇಂದ್ರ, 10 ನಮ್ಮ ಕ್ಲಿನಿಕ್‍ಗಳಲ್ಲಿ 5 ಕ್ಲಿನಿಕ್ ಆರಂಭಿಸಿದ್ದಾಗಿ ಲೋಕಾಯುಕ್ತಿರಿಗೆ ವಿವರಿಸಿದದರು.
ಕ್ಷೀಣಿಸುತ್ತಿರುವ ಕೆರೆಗಳನ್ನು ಸಮರ್ಥವಾಗಿ ನಿರ್ವಹಣೆ ಮಾಡಿ, ನೀರಿನ ಸಮೃದ್ಧವಾಗಿ ಸದ್ಭಳಕೆ ಮಾಡಿಕೊಳ್ಳಲು ಪರಿಣಾಮಕಾರಿ ಯೋಜನೆ ರೂಪಿಸುವಂತೆ ಸಲಹೆ ನೀಡಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.