ಸಾಧ್ಯವಿದ್ರೆ ವಿಧೇಯಕ ಅಂಗೀಕಾರ ತಡೆಯಿರಿ- ಪ್ರತಿಪಕ್ಷಗಳಿಗೆ ಸಚಿವ ಪ್ರಹ್ಲಾದ್‌ ಜೋಶಿ ಸವಾಲು

- ಸಂಸತ್‌ನಲ್ಲಿ ಮುಂದುವರಿದ "ಮಣಿಪುರ" ಗದ್ದಲ

Team Udayavani, Jul 29, 2023, 7:36 AM IST

prahlad joshi

ನವದೆಹಲಿ: “ನಮಗೆ ಎಷ್ಟು ಬೇಕೋ ಅಷ್ಟು ಸಂಖ್ಯಾಬಲ ಇದೆ. ನಿಮ್ಮಲ್ಲಿ ಸಂಖ್ಯಾಬಲ ಇದ್ದರೆ, ನಮ್ಮ ವಿಧೇಯಕಗಳನ್ನು ಅಂಗೀಕಾರವಾಗದಂತೆ ತಡೆಯಿರಿ”

ಹೀಗೆಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ. ಮಣಿಪುರ ಗಲಭೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಒತ್ತಾಯಿಸಿ ಈಗಾಗಲೇ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ನೋಟಿಸ್‌ ನೀಡಿವೆ. ಆದರೆ, ಈ ಗೊತ್ತುವಳಿ ಕುರಿತು ಚರ್ಚೆ ನಡೆಸದೇ, ಸರ್ಕಾರವು ವಿಧೇಯಕಗಳ ಮಂಡನೆ-ಅಂಗೀಕಾರ ಪ್ರಕ್ರಿಯೆ ನಡೆಸುತ್ತಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ನಾಯಕರಿಗೆ ಸಚಿವ ಜೋಶಿ ಈ ರೀತಿ ಸವಾಲು ಹಾಕಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ, “1978ರ ಮೇ 10ರಂದು ಅವಿಶ್ವಾಸ ಗೊತ್ತುವಳಿ ಕುರಿತ ಚರ್ಚೆಯನ್ನು ನಿರ್ಣಯ ಮಂಡನೆಯಾದ ಕೂಡಲೇ ಕೈಗೆತ್ತಿಕೊಳ್ಳಲಾಗಿತ್ತು’ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಹ್ಲಾದ್‌ ಜೋಶಿ, ಎಲ್ಲವೂ ನಿಯಮಗಳ ಪ್ರಕಾರವೇ ನಡೆಯುತ್ತಿದೆ. 10 ದಿನಗಳ ಒಳಗಾಗಿ ಅವಿಶ್ವಾಸ ಗೊತ್ತುವಳಿ ಕುರಿತು ಚರ್ಚೆಯಾಗಬೇಕು. ನಮಗೆ ಎಷ್ಟು ಬೇಕೋ ಅಷ್ಟು ಸಂಖ್ಯಾಬಲ ಇದೆ. ನಿಮ್ಮಲ್ಲಿ ಸಂಖ್ಯಾಬಲ ಇದ್ದರೆ, ನಮ್ಮ ವಿಧೇಯಕಗಳನ್ನು ಅಂಗೀಕಾರವಾಗದಂತೆ ತಡೆಯಿರಿ ಎಂದು ಸವಾಲು ಹಾಕಿದರು. ಶುಕ್ರವಾರವೂ ಎರಡೂ ಸದನಗಳಲ್ಲಿ ಪ್ರತಿಪಕ್ಷಗಳ ಕೋಲಾಹಲವೆಬ್ಬಿಸಿದ ಕಾರಣ, ಕಲಾಪಗಳನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಸರ್ಕಾರಕ್ಕೆ ವೈಎಸ್‌ಆರ್‌ಸಿಪಿ ಬೆಂಬಲ:

ಜಗನ್‌ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿ ಸಂಸತ್‌ನಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಪ್ರತಿಪಕ್ಷಗಳ ಒಕ್ಕೂಟವು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯ ವಿರುದ್ಧ ಮತ ಚಲಾಯಿಸುವುದಾಗಿ ಹೇಳಿದೆ. ಇದು ಎಲ್ಲರೂ ಒಗ್ಗೂಡಿ ಕೆಲಸ ಮಾಡುವ ಸಮಯವೇ ಹೊರತು, ಪರಸ್ಪರ ಕಿತ್ತಾಡುವ ಸಮಯವಲ್ಲ. ಮಣಿಪುರ ಹಾಗೂ ಸುತ್ತಮುತ್ತಲಿನ ಎರಡು ರಾಜ್ಯಗಳಲ್ಲಿ ಪ್ರಕ್ಷುಬ್ಧ ವಾತಾವರಣವಿರುವಾಗ ಕೇಂದ್ರ ಸರ್ಕಾರವನ್ನು ದುರ್ಬಲಗೊಳಿಸುವುದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾದದ್ದು. ಹೀಗಾಗಿ ನಾವು ನಿರ್ಣಯದ ವಿರುದ್ಧ ಮತ ಚಲಾಯಿಸುತ್ತೇವೆ ಎಂದು ವೈಎಸ್ಸಾರ್‌ ಕಾಂಗ್ರೆಸ್‌ ಪಕ್ಷದ ಸಂಸದೀಯ ಪಕ್ಷದ ನಾಯಕ ವಿಜಯಸಾಯಿ ರೆಡ್ಡಿ ಹೇಳಿದ್ದಾರೆ.

ನಾಟಕ ಮಾಡಬೇಡಿ: ಡೆರೆಕ್‌ ವಿರುದ್ಧ ಧನ್ಕ‌ರ್‌ ಗರಂ

ಒಂದು ವಾರದಿಂದಲೂ ಗದ್ದಲದಿಂದಾಗಿ ಕಲಾಪಗಳು ನಡೆಯುತ್ತಲೇ ಇಲ್ಲ. ಇದರ ಮಧ್ಯೆಯೇ ಶುಕ್ರವಾರ ರಾಜ್ಯಸಭೆಯು ತೃಣಮೂಲ ಕಾಂಗ್ರೆಸ್‌ ಸದಸ್ಯ ಡೆರೆಕ್‌ ಒ ಬ್ರಿಯಾನ್‌ ಮತ್ತು ರಾಜ್ಯಸಭೆ ಅಧ್ಯಕ್ಷ ಜಗದೀಪ್‌ ಧನ್ಕರ್‌ ನಡುವಿನ ವಾಗ್ವಾದಕ್ಕೆ ಸಾಕ್ಷಿಯಾಯಿತು. ಪ್ರತಿಪಕ್ಷಗಳ ಗದ್ದಲದಿಂದ ಬೇಸತ್ತ ಧನ್ಕರ್‌ ಅವರು, ಇಡೀ ದೇಶವೇ ಸಂಸತ್‌ನ ಆಗುಹೋಗುಗಳನ್ನು ನೋಡುತ್ತಿದೆ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಡೆರೆಕ್‌ ಒ ಬ್ರಿಯಾನ್‌, “ನಮಗೆ ಅದು ಗೊತ್ತು’ ಎಂದರು. ಆಗ ಧನ್ಕರ್‌, “ಮಾತಾಡುವುದು ಬಿಟ್ಟು ಕಿವಿಗೊಟ್ಟು ಕೇಳಿ, ಮೊದಲು ನಿಮ್ಮ ಆಸನದಲ್ಲಿ ಕುಳಿತುಕೊಳ್ಳಿ’ ಎಂದು ಸೂಚಿಸಿದರು. ಆದರೂ, ಡೆರೆಕ್‌ ಅವರು ತಮ್ಮ ಮಾತುಗಳನ್ನು ಮುಂದುವರಿಸಿದರು. ಇದರಿಂದ ಕೆಂಡಾಮಂಡಲರಾದ ಧನ್ಕರ್‌, “ಮಿಸ್ಟರ್‌ ಡೆರೆಕ್‌ ಒ ಬ್ರಿಯಾನ್‌, ಈ ರೀತಿ ನಾಟಕವಾಡುವುದು ನಿಮಗೆ ಚಾಳಿಯಾಗಿಬಿಟ್ಟಿದೆ.

ಕನಿಷ್ಠಪಕ್ಷ ಸಭಾಧ್ಯಕ್ಷರ ಪೀಠಕ್ಕಾದರೂ ಗೌರವ ಕೊಡಿ’ ಎಂದರು. ಆಗ ಸಿಟ್ಟಾದ ಡೆರೆಕ್‌, “ನಾಟಕ? ಈ ಪದವನ್ನು ನಾನು ಆಕ್ಷೇಪಿಸುತ್ತೇನೆ. ನಾನು ಸದನದ ರೂಲ್‌ಗಳ ಬಗ್ಗೆ ಮಾತನಾಡುತ್ತಿದ್ದೇನೆ. ಮಣಿಪುರ ವಿಚಾರದಲ್ಲಿ ಗಂಭೀರ ಚರ್ಚೆಯಾಗಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ’ ಎಂದರು. ಗದ್ದಲ ಹೆಚ್ಚಾದಾಗ ಕಲಾಪವನ್ನು ಮುಂದೂಡಲಾಯಿತು.

3 ವಿಧೇಯಕ ಅಂಗೀಕಾರ

ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಮೂರು ವಿಧೇಯಕಗಳು ಅಂಗೀಕಾರಗೊಂಡಿವೆ. ಗಣಿ ಮತ್ತು ಖನಿಜ ತಿದ್ದುಪಡಿ ವಿಧೇಯಕ, ರಾಷ್ಟ್ರೀಯ ಶುಶ್ರೂಷಕ ಮತ್ತು ಪ್ರಸವಶಾಸ್ತ್ರ ಆಯೋಗ ವಿಧೇಯಕ, 2023 ಮತ್ತು ರಾಷ್ಟ್ರೀಯ ದಂತ ಆಯೋಗ ವಿಧೇಯಕ, 2023ಕ್ಕೆ ಅಂಗೀಕಾರ ಪಡೆಯಲಾಗಿದೆ. ಇದೇ ವೇಳೆ, ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌(ಐಐಎಂ) ಕಾಯ್ದೆ, 2017ಕ್ಕೆ ತಿದ್ದುಪಡಿ ತರುವಂಥ ವಿಧೇಯಕವನ್ನು ಶುಕ್ರವಾರ ಮಂಡಿಸಲಾಗಿದೆ.

ಏನಿದು ಗಣಿ, ಖನಿಜ ವಿಧೇಯಕ?:

ಕೆಲವು ನಿರ್ದಿಷ್ಟ ಖನಿಜಗಳ ಅನ್ವೇಷಣೆಗಾಗಿ ಖಾಸಗಿ ವಲಯಕ್ಕೂ ಪರವಾನಗಿ ಒದಗಿಸುವ ವಿಧೇಯಕ ಇದಾಗಿದೆ. ಅಲ್ಲದೇ, ಗಣಿ ಮತ್ತು ಖನಿಜಗಳ ತಿದ್ದುಪಡಿ ವಿಧೇಯಕವು, ಗಣಿಗಳನ್ನು ಹರಾಜು ಹಾಕುವ ಮತ್ತು ನಿರ್ದಿಷ್ಟ ಖನಿಜಗಳ ಶೋಧನೆಗೆ ಲೈಸೆನ್ಸ್‌ ಒದಗಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಇದರಿಂದಾಗಿ, 1 ಶತಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆ ಸಾಧ್ಯವಾಗಲಿದ್ದು, ಭಾರತವು ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಲಿದೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಎಂಬಿಬಿಎಸ್‌ ಸೀಟುಗಳ ಹೆಚ್ಚಳ

2014ಕ್ಕೆ ಹೋಲಿಸಿದರೆ ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆಯಲ್ಲಿ ಶೇ.82ರಷ್ಟು ಹೆಚ್ಚಳವಾಗಿದ್ದು, ಆಗ 387 ಇದ್ದಿದ್ದು ಈಗ 704ಕ್ಕೇರಿಕೆಯಾಗಿದೆ ಎಂದು ಲೋಕಸಭೆಗೆ ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಲಿಖೀತ ಮಾಹಿತಿ ನೀಡಿದ್ದಾರೆ. ಜತೆಗೆ, ಎಂಬಿಬಿಎಸ್‌ ಸೀಟುಗಳ ಸಂಖ್ಯೆಯಲ್ಲೂ ಶೇ.110ರಷ್ಟು ಏರಿಕೆಯಾಗಿದ್ದು, 2014ರಲ್ಲಿ 51,348 ಇದ್ದ ಎಂಬಿಬಿಎಸ್‌ ಸೀಟುಗಳು ಈಗ 1,07,948ಕ್ಕೇರಿವೆ ಎಂದೂ ಅವರು ತಿಳಿಸಿದ್ದಾರೆ.

ಇಂಡಿಯಾ ನಿಯೋಗದಿಂದ ಇಂದು ಮಣಿಪುರ ಭೇಟಿ

ಶನಿವಾರದಿಂದ 2 ದಿನಗಳ ಕಾಲ ಪ್ರತಿಪಕ್ಷಗಳ 20 ನಾಯಕರ ನಿಯೋಗವು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದೆ. ಈ ಕುರಿತು ಶುಕ್ರವಾರ ಮಾಹಿತಿ ನೀಡಿದ ಲೋಕಸಭೆಯಲ್ಲಿನ ಕಾಂಗ್ರೆಸ್‌ ಉಪನಾಯಕ ಗೌರವ್‌ ಗೊಗೋಯ್‌, “ಮೊದಲಿಗೆ ನಾವು ಮಣಿಪುರದ ನೈಜ ಸ್ಥಿತಿಗತಿಯನ್ನು ಅವಲೋಕಿಸಲಿದ್ದೇವೆ. ನಂತರ ಅಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಸಂಸತ್‌ಗೆ ಕೆಲವು ಶಿಫಾರಸುಗಳನ್ನು ಸಲ್ಲಿಸಲಿದ್ದೇವೆ’ ಎಂದಿದ್ದಾರೆ. ಇದೇ ವೇಳೆ, ಮಣಿಪುರ ಗಲಭೆ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.