ಅರ್ಕಾವತಿ ಭೂ ಹಗರಣ ತನಿಖೆಯಾದರೆ ಕಾಂಗ್ರೆಸ್‌ ಬಣ್ಣ ಬಯಲು: ನಡ್ಡಾ


Team Udayavani, May 1, 2023, 7:31 AM IST

nadda

ಹೊನ್ನಾಳಿ: ರಾಜ್ಯದಲ್ಲಿ 2013ರಿಂದ 2018ರ ವರೆಗೆ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಿಎಸ್‌ಐ, ಶಿಕ್ಷಕರ ಹಗರಣ ಸಹಿತ ಪ್ರತಿ ವರ್ಷ ಹಗರಣಗಳನ್ನು ಮಾಡಿದೆ. ಅರ್ಕಾವತಿ ಭೂ ಹಗರಣದಲ್ಲಿ 8 ಸಾವಿರ ಕೋಟಿ ರೂ.ಗಳ ಹಗರಣ ನಡೆದಿದ್ದು, ತನಿಖೆಗೊಳಪಡಿಸಿದರೆ ಕಾಂಗ್ರೆಸ್‌ನವರ ಬಣ್ಣ ಬಯಲಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಪಟ್ಟಣದ ಅಗಳ ಮೈದಾನದಲ್ಲಿ ಹೊನ್ನಾಳಿ-ನ್ಯಾಮತಿ ಮಂಡಲದ ವತಿ ಯಿಂದ ಬಿಜೆಪಿ ಅಭ್ಯರ್ಥಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಪರ ರವಿವಾರ ಹಮ್ಮಿಕೊಂಡಿದ್ದ ಚುನಾವಣ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಇದ್ದಾಗ ರಾಜ್ಯದ ವಿವಿಧ ಕಡೆ ಬಾಂಬ್‌ ಸ್ಫೋಟ ಹಾಗೂ ಹಲವಾರು ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿವೆ. ಹಲವು ಆರೋಪಿಗಳ ಮೇಲಿದ್ದ ಪ್ರಕರಣಗಳನ್ನು ಅಂದಿನ ಸರಕಾರ ಹಿಂಪಡೆದಿತ್ತು ಎಂದು ಆರೋಪಿಸಿದರು.

ಕಾಂಗ್ರೆಸ್‌ ಸರಕಾರ ಬಂದರೆ ಎಸ್‌ಸಿ-ಎಸ್‌ಟಿ, ಲಿಂಗಾಯತ, ಒಕ್ಕಲಿಗ ಸಮಾಜಕ್ಕೆ ಹೆಚ್ಚಿಸಿರುವ ಮೀಸಲಾತಿಯನ್ನು ವಾಪಸ್‌ ಪಡೆಯುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಕಾರ್ಡ್‌ ಹೆಸರಿನಲ್ಲಿ ಗೃಹಿಣಿಯರಿಗೆ 2 ಸಾವಿರ ರೂ. ಸಹಿತ ಇಲ್ಲಸಲ್ಲದ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎನ್ನುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಅ ಧಿಕಾರಕ್ಕೆ ಬರುವುದೇ ಇಲ್ಲ. ಭ್ರಷ್ಟಾಚಾರದಲ್ಲಿ ಸಿಲುಕಿ ಈಗ ಜಾಮೀನಿನಲ್ಲಿರುವ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ , ಸೋನಿಯಾ ಗಾಂಧಿ  ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ ಬಿಜೆಪಿಯನ್ನು ಟೀಕಿಸುವ ಯಾವುದೇ ನೈತಿಕತೆಯಿಲ್ಲ ಎಂದು ಹೇಳಿದರು.

2014ಕ್ಕೆ ಮುನ್ನ ಭಾರತ ಇತರ ದೇಶಗಳ ಮುಂದೆ ಮಂಡಿಯೂರುವ ಪರಿಸ್ಥಿತಿ ಇತ್ತು. 2014ರ ಬಳಿಕ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನಮ್ಮ ದೇಶದಲ್ಲಷ್ಟೇ ಅಲ್ಲ, ವಿಶ್ವದ ಅಗ್ರಗಣ್ಯ ರಾಷ್ಟ್ರಗಳು ಭಾರತದತ್ತ ನೋಡುವ ಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ. ವಿಶ್ವದ ದೊಡ್ಡ ದೇಶಗಳೆಂದು ಹೆಸರು ಮಾಡಿರುವ ಅಮೆರಿಕ, ಬ್ರಿಟನ್‌, ರಷ್ಯಾ ಮುಂತಾದವು ನಮ್ಮ ದೇಶಕ್ಕೆ ತಲೆ ಬಾಗಿವೆ. ಇದಕ್ಕಿಂತ ದೊಡ್ಡ ಸಾಧನೆ ಇನ್ನೇನಿದೆ ಎಂದು ಪ್ರಶ್ನಿಸಿದರು.

ಶಾಸಕ ಎಂ.ಪಿ. ರೇಣುಕಾಚಾರ್ಯ, ಸಂಸದ ಜಿ.ಎಂ. ಸಿದ್ದೇಶ್ವರ, ವಿಧಾನ ಪರಿಷತ್‌ ಮಾಜಿ ಸದಸ್ಯ ಡಾ| ಶಿವಯೋಗಿ ಸ್ವಾಮಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಕಾಂಗ್ರೆಸ್‌-ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖ
ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅ ಧಿಕಾರದಲ್ಲಿದ್ದಾಗ ಕಿಸಾನ್‌ ಸಮ್ಮಾನ್‌ ಯೋಜನೆಗೆ ಕೇವಲ 17 ಫಲಾನುಭವಿಗಳ ಹೆಸರು ಕಳುಹಿಸಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ರಾಜ್ಯದಿಂದ 54 ಲಕ್ಷ ರೈತ ಫಲಾನುಭವಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಇದು ಬಿಜೆಪಿ ಮತ್ತು ಇತರ ಪಕ್ಷಗಳ ನಾಯಕರಿಗೆ ಇರುವ ವ್ಯತ್ಯಾಸ ಎಂದು ಜೆ.ಪಿ. ನಡ್ಡಾ ಕುಟುಕಿದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.