ಪಡಿತರ ಅಕ್ರಮದ ಮೂಲ ಬೇಧಿಸಲು ಸೂಚನೆ : ಶಾಸಕ ನಡಹಳ್ಳಿ
Team Udayavani, Aug 28, 2020, 2:07 PM IST
ವಿಜಯಪುರ: ಸರಕಾರ ಬೆವರಿಗೆ ವಿತರಿಸುವ ಪಡಿತರ ಧಾನ್ಯಗಳನ್ನು ಅಕ್ರಮವಾಗಿ ಅನ್ಯ ರಾಜ್ಯಗಳಿಗೆ ಸಾಗಿಸುವ ಜಾಲ ಬೇಧಿಸಲು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಸೂಚಿಸಿದ್ದೇನೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎರಡು ದಿನ ಹಿಂದೆ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮೂರು ಲಾರಿಗಳಲ್ಲಿ ಸಾಗಿಸುವುದನ್ನು ಎರಡು ದಿನದ ಹಿಂದೆ ನಿಗಮದ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ 11 ಲಕ್ಷ ರೂ. ಮೌಲ್ಯದ ಅಕ್ಕಿಯನ್ನು ಪತ್ತೆ ಹಚ್ಚಿ, ಪ್ರಕರಣದಲ್ಲಿ ಲಾರಿ ಚಲಕರ ವಿರುದ್ಧ ದೂರು ದಾಖಲಿಸಿದ್ದಾರೆ.
ಆದರೆ ಲಾರಿ ಚಾಲಕ, ಕ್ಲೀನರ್ ವಿರುದ್ಧ ದೂರು ದಾಖಲಿಸಿದರೆ ಸಾಲದು. ಬಡವರ ಅನ್ನವನ್ನು ಕದಿಯುವ ಈ ಅಕ್ರಮ ಜಾಲದ ಹಿಂದಿರುವ ಮೂಲವನ್ನು ಬೇಧಿಸುವ ಅಗತ್ಯವಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ಪಿ ಅವರಿಗೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.