ಅಕ್ರಮ ಸಾಗಾಟ: ಹಸುಗಳ ರಕ್ಷಣೆ
Team Udayavani, Jun 16, 2023, 5:17 AM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೆಟ್ಟು ವಿನಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದವರ ಬಗ್ಗೆ ಸ್ಥಳೀಯರು ನೀಡಿದ ನಿಖರ ಮಾಹಿತಿಯ ಮೇರೆಗೆ ಕೋಟ ಪೊಲೀಸರು ಮೂರು ಹಸುಗಳನ್ನು ರಕ್ಷಿಸಿದ ಘಟನೆ ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ.
ಬೇಳೂರು ತೆಂಕಬೆಟ್ಟು ಪರಿಸರದಲ್ಲಿನ ಹಸುಗಳನ್ನು ಏಸ್ ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಮಧುವನ ಮಾರ್ಗವಾಗಿ ಅಕ್ರಮವಾಗಿ ಗೋವುಗಳನ್ನು ಸಾಗುತ್ತಿರುವ ಐವರ ತಂಡಗಳ ಬಗ್ಗೆ ನಿಖರವಾದ ಮಾಹಿತಿ ನೀಡಿದ ಸ್ಥಳೀಯ ಯುವಕರ ತಂಡ ತತ್‌ಕ್ಷಣವೇ ಕೋಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಅದೇ ಸಂದರ್ಭದಲ್ಲಿ ಗ್ರಾಮ ಗಸ್ತಿನಲ್ಲಿದ್ದ ಎಎಸ್‌ಐ ಗಣೇಶ್ ಪೈ ಹಾಗೂ ಪೊಲೀಸ್ ಸಿಬಂದಿ ಪ್ರಸನ್ನ ಮಾಲಾಡಿ ಅವರು ಪೊಲೀಸ್ ಜೀಪ್‌ನಲ್ಲಿ ಏಸ್ ವಾಹನವನ್ನು ಹಿಂಬಾಲಿಸಿದಾಗ ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಕೋಟ ಪೊಲೀಸರು ಮೂರು ಹಸುಗಳನ್ನು ರಕ್ಷಿಸಿ, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಕಿವಿಯಲ್ಲಿತ್ತು ಕಿವಿಯೋಲೆ!
ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಮೂರು ಹಸುಗಳ ಕಿವಿಯಲ್ಲಿ ಕಿವಿಯೋಲೆಗಳಿದ್ದು, ಈ ಅಕ್ರಮ ಗೋಸಾಗಾಟದ ಹಿಂದೆ ಬೃಹತ್ ಜಾಲವೊಂದು ಕಾರ್ಯಚರಿಸುತ್ತಿರುವ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಗ್ರಾಮಸ್ಥರು ಆತಂಕ ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.