ಡಿ.16 ರ ವರೆಗೆ ಮಳೆ ಮುಂದುವರಿಯುವ ಸೂಚನೆ ; ಕೆಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ರೈತರಿಗೆ ಬೆಳೆ ಚಿಂತೆ ; ಮಕ್ಕಳಿಗೆ ಚಳಿ-ಮಳೆಯಿಂದ ಆರೋಗ್ಯದ ಚಿಂತೆ
Team Udayavani, Dec 12, 2022, 2:48 PM IST
ಬೆಂಗಳೂರು : ಮ್ಯಾಂಡಸ್ ಚಂಡಮಾರುತ ಪ್ರಭಾವದಿಂದ ರಾಜ್ಯದಲ್ಲಿ ಡಿ.16 ರ ವರೆಗೆ ಮಳೆ ಮುಂದುವರಿಯಲಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಡಿಸೆಂಬರ್ 16 ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ ಮತ್ತು ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.
ನೆರೆಯ ರಾಜ್ಯಗಳಲ್ಲಿ ‘ಮಂಡೌಸ್’ ಚಂಡಮಾರುತ ದುರ್ಬಲಗೊಂಡಿದ್ದರೂ, ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಯಲ್ಲೋ ಅಲರ್ಟ್ ನೀಡಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯಾವುದೇ ಹಾನಿಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಿಂದ ಹಾನಿಯಾಗುವ ಸಾಧ್ಯತೆ ಇದೆ. ಕೇಂದ್ರ ಜಿಲ್ಲೆಗಳಾದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲೂ ಮಳೆಯಾಗಲಿದೆ. ಸತತ ಮಳೆಯಿಂದಾಗಿ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ.
ಸತತ ಮಳೆ ಹಿನ್ನೆಲೆಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಚಳಿ ಮತ್ತು ಮಳೆಯ ವಾತಾವರಣದಿಂದಾಗಿ ಹಲವು ಮಕ್ಕಳು ಅಸ್ವಸ್ಥರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.