Jail ನಲ್ಲಿ ತಂದೆಯ ಜೀವಕ್ಕೆ ಆಪಾಯ ಎದುರಾಗಿದೆ: ಚಂದ್ರಬಾಬು ನಾಯ್ಡು ಪುತ್ರ
ಏನಾದರೂ ಆದರೆ ಅದಕ್ಕೆ ಸಿಎಂ ಜಗನ್ ಹೊಣೆ... ಸುಪ್ರೀಂ ಮೊರೆ
Team Udayavani, Oct 13, 2023, 4:31 PM IST
ವಿಜಯವಾಡ : ತಮ್ಮ ತಂದೆ ಹಾಗೂ ಟಿಡಿಪಿ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಶುಕ್ರವಾರ ಆರೋಪಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಲೋಕೇಶ್ ಚಂದ್ರಬಾಬು ನಾಯ್ಡುಅವರು, ಚಂದ್ರಬಾಬು ಅವರ ಆರೋಗ್ಯದ ಕಾರಣಗಳನ್ನು ಉಲ್ಲೇಖಿಸಿ “ಜೀವಕ್ಕೆ ನಿರಾಕರಿಸಲಾಗದ ಮತ್ತು ತತ್ ಕ್ಷಣದ ಬೆದರಿಕೆ ಇದೆ. ಅವರಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡಲಾಗುತ್ತಿದೆ. ಅವರ ಸುರಕ್ಷತೆಯು ಪ್ರಶ್ನಾತೀತವಾಗಿ ಅಪಾಯದಲ್ಲಿದೆ” ಎಂದು ಹೇಳಿಕೊಂಡಿದ್ದಾರೆ.
ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಸಕಾಲಿಕ ವೈದ್ಯಕೀಯ ಸಹಾಯದ ಕೊರತೆಯಿಂದಾಗಿ ಅವರು ತೂಕವನ್ನು ಕಳೆದುಕೊಂಡಿದ್ದಾರೆ ಮತ್ತು ಸೋಂಕುಗಳು ಮತ್ತು ಅಲರ್ಜಿಗಳಿಂದ ಬಳಲುತ್ತಿದ್ದಾರೆ ಎಂದು ನಾರಾ ಲೋಕೇಶ್ ಹೇಳಿಕೊಂಡಿದ್ದಾರೆ.
“ನಾಯ್ಡು ಅವರು ಸೊಳ್ಳೆಗಳು, ಕಲುಷಿತ ನೀರು, ತೂಕ ನಷ್ಟ, ಸೋಂಕುಗಳು ಮತ್ತು ಅಲರ್ಜಿಗಳೊಂದಿಗೆ ವ್ಯವಹರಿಸುತ್ತಿರುವ ಭೀಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ, ಸಕಾಲಿಕ ವೈದ್ಯಕೀಯ ನೆರವು ಲಭ್ಯವಿಲ್ಲ. ಆಂಧ್ರ ಪ್ರದೇಶ ಸರ್ಕಾರ ಅವರಿಗೆ ಸ್ಟೀರಾಯ್ಡ್ ಗಳನ್ನು ನೀಡಲು ಪ್ರಯತ್ನಿಸುತ್ತಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ನಲ್ಲಿ ಲೋಕೇಶ್ ಆರೋಪಿಸಿದ್ದಾರೆ.
“ಸರ್ಕಾರಿ ವೈದ್ಯರು ಮತ್ತು ಆಡಳಿತವು ಏನನ್ನು ಮರೆಮಾಡಲು ಪ್ರಯತ್ನಿಸುತ್ತಿದೆ?” ಎಂದು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಟ್ಯಾಗ್ ಮಾಡಿರುವ ನಾರಾ ಲೋಕೇಶ್, ನಾಯ್ಡು ಅವರಿಗೆ ಏನೇ ಆದರೂ ಜಗನ್ ಹೊಣೆಯಾಗುತ್ತಾರೆ ಎಂದು ಬರೆದಿದ್ದಾರೆ.
ನಿರೀಕ್ಷಣಾ ಜಾಮೀನು
ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಂಗಾಲು ಹಿಂಸಾಚಾರ ಪ್ರಕರಣದ ವಾದ-ವಿವಾದಗಳನ್ನು ಆಲಿಸಿದ ಹೈಕೋರ್ಟ್ ಗುರುವಾರ ತನ್ನ ಆದೇಶಗಳನ್ನು ಕಾಯ್ದಿರಿಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.ಇತ್ತೀಚೆಗೆ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ನಾಯ್ಡು ಅವರು ಅಂಗಲ್ಲು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದರು.
ಸುಪ್ರೀಂ ಕೋರ್ಟ್‌ಗೆ ಮೊರೆ
ರಾಜ್ಯದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟವಾದ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಸಿಎಂ ಅವರನ್ನು ಸಿಐಡಿ ಕಳೆದ ತಿಂಗಳು ಬಂಧಿಸಿತ್ತು. ಅವರ ಜಾಮೀನು ಅರ್ಜಿಯನ್ನು ವಿಜಯವಾಡದ ಎಸಿಬಿ ನ್ಯಾಯಾಲಯ ತಿರಸ್ಕರಿಸಿದೆ. ಏತನ್ಮಧ್ಯೆ, ಇಂದು ಎಪಿ ಫೈಬರ್ ನೆಟ್ ಹಗರಣ ಪ್ರಕರಣದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತರ ಚಂದ್ರಬಾಬು ನಾಯ್ಡು ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.