ಪಾಕ್ ನಲ್ಲಿ ಅಶಾಂತಿ; ಪ್ರಮುಖ ಪಿಟಿಐ ನಾಯಕರ ಬಂಧನ: ಸೇನೆ ನಿಯೋಜನೆ

ಸೇನಾ ನೆಲೆಗಳನ್ನೇ ಗುರಿಯಾಗಿರಿಸಿಕೊಂಡ ಪ್ರತಿಭಟನಾಕಾರರು

Team Udayavani, May 11, 2023, 3:53 PM IST

1-sdadad

ಇಸ್ಲಾಮಾಬಾದ್ : ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದ ಬಳಿಕ ಪಾಕಿಸ್ಥಾನದ ಅಧಿಕಾರಿಗಳು ಗುರುವಾರ ಅವರ ಬೆಂಬಲಿಗರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ರಾತ್ರೋ ರಾತ್ರಿ ನಡೆಸಿದ ದಾಳಿಗಳಲ್ಲಿ ಸಾವಿರಾರು ಜನರನ್ನು ಬಂಧಿಸಿದ್ದು, ಭುಗಿಲೆದ್ದಿರುವ ಹಿಂಸಾಚಾರದ ಅಲೆಯನ್ನು ನಿಯಂತ್ರಿಸಲು ದೇಶಾದ್ಯಂತ ಸೈನ್ಯವನ್ನು ನಿಯೋಜಿಸಲಾಗಿದೆ.

ಮಿಲಿಟರಿ ಸ್ವಾಧೀನ, ರಾಜಕೀಯ ಬಿಕ್ಕಟ್ಟು ಮತ್ತು ಹಿಂಸಾಚಾರಕ್ಕೆ ಒಗ್ಗಿಕೊಂಡಿರುವ ಪಾಕ್ ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ರಾವಲ್ಪಿಂಡಿಯ ಗ್ಯಾರಿಸನ್ ಸಿಟಿಯಲ್ಲಿ ಚುನಾವಣಾ ರ‍್ಯಾಲಿಯಲ್ಲಿ 2007 ರಲ್ಲಿ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರ ಹತ್ಯೆಯ ನಂತರದ ಅಶಾಂತಿಯ ವಾತಾವರಣ ಮತ್ತೆ ನಿರ್ಮಾಣವಾಗಿದೆ.

ಮಂಗಳವಾರ ಖಾನ್ ಅವರ ನಾಟಕೀಯ ಬಂಧನದ ನಂತರ ಪೊಲೀಸರೊಂದಿಗೆ ಘರ್ಷಣೆಗಳು ಅವರ ಕನಿಷ್ಠ ಎಂಟು ಬೆಂಬಲಿಗರನ್ನು ಬಲಿ ಪಡೆದಿವೆ. ನೂರಾರು ಜನರು ಗಾಯಗೊಂಡಿದ್ದಾರೆ. ಐದು ಸಾವುಗಳು ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ವರದಿಯಾಗಿದೆ, ಎರಡು ಪೂರ್ವ ನಗರವಾದ ಲಾಹೋರ್‌ನಲ್ಲಿ ಮತ್ತು ಒಬ್ಬ ನೈಋತ್ಯ ನಗರವಾದ ಕ್ವೆಟ್ಟಾದಲ್ಲಿ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ರಾಜಧಾನಿ ಇಸ್ಲಾಮಾಬಾದ್‌ನ ಹೊರವಲಯದಲ್ಲಿರುವ ರೈಲು ನಿಲ್ದಾಣವನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದ್ದಾರೆ.

ಪಾಕ್ ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR ) ಮೇ 9 ರಂದು ನಡೆದ ಘಟನೆಗಳನ್ನು ದೇಶದ ಇತಿಹಾಸದಲ್ಲಿ “ಕಪ್ಪು ಅಧ್ಯಾಯ” ಎಂದು ಬಣ್ಣಿಸಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಪ್ರತಿಭಟನೆಗಳು ನಿರ್ದಿಷ್ಟವಾಗಿ ಸೇನೆಯ ಆಸ್ತಿ ಮತ್ತು ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಹೇಳಿದೆ.

ಖಾನ್ ಬಂಧನ ನಂತರ, ಸೇನೆಯ ಆಸ್ತಿಗಳು ಮತ್ತು ಸ್ಥಾಪನೆಗಳ ಮೇಲೆ ಸಂಘಟಿತ ದಾಳಿಗಳು ನಡೆದವು ಮತ್ತು ಸೈನ್ಯ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ. ಸೇನೆಯು ಅತ್ಯಂತ ಸಹನೆ, ತಾಳ್ಮೆ ಮತ್ತು ಸಂಯಮವನ್ನು ತೋರಿಸಿದೆ ಮತ್ತು ದೇಶದ ಹಿತದೃಷ್ಟಿಯಿಂದ ಅತ್ಯಂತ ತಾಳ್ಮೆ ಮತ್ತು ಸಹಿಷ್ಣುತೆಯಿಂದ ಕೆಲಸ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಿಎಎಫ್‌ಎಂಎಂ ಆಲಂ ಏರ್ ಬೇಸ್ ಮಿಯಾನ್‌ವಾಲಿಯಲ್ಲಿ ಪಿಟಿಐ ಕಾರ್ಯಕರ್ತರ ದಾಳಿ ಮತ್ತು ವಿಧ್ವಂಸಕ ಕೃತ್ಯಗಳು ವರದಿಯಾಗಿವೆ ಎಂದು ಪಾಕಿಸ್ಥಾನ್ ಡೈಲಿ ಟ್ವೀಟ್‌ನಲ್ಲಿ ವರದಿ ಮಾಡಿದೆ.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

1-usss

US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.