10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಭವನ ಉದ್ಘಾಟನೆ
3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ
Team Udayavani, Dec 13, 2022, 9:26 PM IST
ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ನೂತನ ಬಿಜೆಪಿ ಕಾರ್ಯಾಲಯ ಭವನಗಳ ಉದ್ಘಾಟನೆ ಹಾಗೂ 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಡಿ.15ರಂದು ನಡೆಯಲಿದೆ ಎಂದು ಕಟ್ಟಡ ಸಮಿತಿ ರಾಜ್ಯಾಧ್ಯಕ್ಷ ಮಾ.ನಾಗರಾಜ್ ಹೇಳಿದರು.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ವಿಜಯಪುರ, ಬಾಗಲಕೋಟೆ, ಕೋಲಾರ, ಚಾಮರಾಜನಗರ, ಹಾವೇರಿ ಮತ್ತು ಗದಗದಲ್ಲಿ ನಿರ್ಮಿಸಿದ ನೂತನ ಕಾರ್ಯಾಲಯಗಳನ್ನು ಕೊಪ್ಪಳದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ವಿಜಯನಗರ, ಕೊಡಗು ಮತ್ತು ಉತ್ತರಕನ್ನಡ ಜಿಲ್ಲಾ ಕಟ್ಟಡಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಬೆಳಗ್ಗೆ ಹೋಮ, ಹವನ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿದೆ. ಕೊಪ್ಪಳ ಜಿಲ್ಲಾ ಕಾರ್ಯಾಲಯದ ಶಿಲಾಫಲಕ ಅನಾವರಣ ಮಾಡುವ ಮೂಲಕ ಜಿಲ್ಲಾ ಕಾರ್ಯಾಲಯ ಭವನವನ್ನು ಜೆ.ಪಿ. ನಡ್ಡಾ ಅವರು ಉದ್ಘಾಟಿಸಲಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಮಾರ್ ಕಟೀಲ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಜಿಲ್ಲಾಧ್ಯಕ್ಷರಾದ ದೊಡ್ಡನಗೌಡ ಪಾಟೀಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಇತರೆ ಒಂಭತ್ತು ಜಿಲ್ಲೆಗಳ ಜಿಲ್ಲಾ ಕಾರ್ಯಾಲಯ ಭವನದ ಉದ್ಘಾಟನೆಯನ್ನು ವರ್ಚುವಲ್ ಮಾಧ್ಯಮದ ಮೂಲಕ ಜೆ.ಪಿ.ನಡ್ಡಾ ನೆರವೇರಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.