IND vs ZIM T20: ಸತತ ನಾಲ್ಕು ಪಂದ್ಯ ಗೆದ್ದ ಭಾರತ, 4-1ರಲ್ಲಿ ಸರಣಿ ಕೈ ವಶ
ಐದನೇ ಪಂದ್ಯದಲ್ಲಿ 42 ರನ್‌ಗಳಿಂದ ಜಯ ದಾಖಲಿಸಿದ ಟೀಂ ಇಂಡಿಯಾ, ಜಿಂಬಾಬ್ವೆ ತಂಡ 125 ರನ್‌ಗೆ ಸರ್ವಪತನ
Team Udayavani, Jul 14, 2024, 9:07 PM IST
ಹರಾರೆ: ಸಂಜು ಸ್ಯಾಮ್ಸನ್ (55) ಬಾರಿಸಿದ ಅಮೋಘ ಅರ್ಧ ಶತಕ ಹಾಗೂ 4 ವಿಕೆಟ್ ಕಬಳಿಸಿ ಮಿಂಚಿದ ಮುಕೇಶ್ ಕುಮಾರ್ ನೆರವಿನಿಂದ ಭಾರತ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಐದನೇ ಪಂದ್ಯದಲ್ಲೂ ವಿಜಯ ಸಾಧಿಸಿದೆ.
ಮೊದಲ ಪಂದ್ಯದಲ್ಲಿ ಅಚ್ಚರಿಯ ಸೋಲು ಕಂಡದ್ದರಿಂದ ಶುಭಮನ್ ಗಿಲ್ ನೇತೃತ್ವದ ಬಳಗ ಕ್ಲೀನ್ ಸ್ವೀಪ್ ಮಾಡುವ ಅವಕಾಶ ಕಳೆದುಕೊಂಡಿತು. ಆ ಬಳಿಕ ಭಾರತ ತಂಡ ಸತತ ಗೆಲುವು ಸಾಧಿಸಿ ಸರಣಿಯನ್ನು 4-1 ಅಂತರದಿಂದ ತನ್ನದಾಗಿಸಿದೆ. ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಸೋತ ಜಿಂಬಾಬ್ವೆ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 167 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಜಿಂಬಾಬ್ವೆ 18.3 ಓವರ್ಗಳಲ್ಲಿ 125 ರನ್ ಬಾರಿಸಿ ಸೋಲೊಪ್ಪಿಕೊಂಡಿತು.
ಭಾರತ ತಂಡಕ್ಕೆ ಆರಂಭಿಕ ಆಘಾತ:
ಮೊದಲು ಬ್ಯಾಟ್ ಮಾಡಿದ ಭಾರತ ತಂಡ 12 ರನ್ಗಳಿಗೆ ಯಶಸ್ವಿ ಜೈಸ್ವಾಲ್ ಔಟಾಗುವ ಮೂಲಕ ಆರಂಭಿಕ ಹಿನ್ನಡೆಗೆ ಒಳಗಾಯಿತು. ಜತೆಗೆ ಶುಭ್ಮನ್ ಗಿಲ್ ಕೂಡ 13 ರನ್‌ಗೆ ಸೀಮಿತಗೊಂಡರು. ನಂತರದಲ್ಲಿ ಅಭಿಷೇಕ್ ಶರ್ಮಾ 14 ರನ್‌ಗೆ ಔಟಾಗುವ ಮೂಲಕ 40 ರನ್ಗಳಿಗೆ 3 ವಿಕೆಟ್ ನಷ್ಟ ಮಾಡಿಕೊಂಡಿತು.
ಆದರೆ ಆ ಬಳಿಕ ಆಡಲು ಬಂದ ಸಂಜು ಸ್ಯಾಮ್ಸನ್ (58) ಹಾಗೂ ರಿಯಾನ್ ಪರಾಗ್ (22) ತಂಡವನ್ನು ಆರಂಭಿಕ ಆಘಾತದಿಂದ ಕಾಪಾಡಿದರು. ಇವರಿಬ್ಬರೂ ಸೇರಿ ತಂಡದ ಮೊತ್ತವನ್ನು 105 ರನ್ಗಳಿಗೆ ಕೊಂಡೊಯ್ದರು. ಬಳಿಕ ಶಿವಂ ದುಬೆ 12 ಎಸೆತಕ್ಕೆ 26 ರನ್ ಬಾರಿಸಿ ಮಿಂಚಿದರು. ಅವರು ಅಮೋಘ ಎರಡು ಸಿಕ್ಸರ್ ಹಾಗೂ ಅಷ್ಟೇ ಬೌಂಡರಿ ಬಾರಿಸಿದರು. ಸಂಕಷ್ಟದಲ್ಲಿದ್ದ ವೇಳೆ ಬ್ಯಾಟ್ ಮಾಡಲು ಬಂದ ಸಂಜು ಸ್ಯಾಮ್ಸನ್ ನಿಧಾನವಾಗಿ ಇನಿಂಗ್ಸ್ ಕಟ್ಟಿದರು. 39 ಎಸೆತಕ್ಕೆ ಅರ್ಧ ಶತಕ ಬಾರಿಸಿದ ಅವರು 45ಎಸೆತಕ್ಕೆ 58 ರನ್ ಬಾರಿಸಿ ಔಟಾದರು. ಅವರ ಇನಿಂಗ್ಸ್ನಲ್ಲಿ 4 ಸಿಕ್ಸರ್ ಹಾಗೂ ಒಂದು ಫೋರ್ ಸೇರಿದ್ದವು. ರಿಂಕು ಸಿಂಗ್ 9 ಎಸೆತಕ್ಕೆ 11 ರನ್ ಬಾರಿಸಿದ್ದಾರೆ.
A 42-run victory in the 5th & Final T20I 🙌
With that win, #TeamIndia complete a 4⃣-1⃣ series win in Zimbabwe 👏👏
Scorecard ▶️ https://t.co/TZH0TNJcBQ#ZIMvIND pic.twitter.com/oJpasyhcTJ
— BCCI (@BCCI) July 14, 2024
ಬೌಲರ್ಗಳ ಅಬ್ಬರ
ಭಾರತ ನೀಡಿದ ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಜಿಂಬಾಬ್ವೆ 15 ರನ್‌ಗೆ 2 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಬಿತ್ತು. ಬಳಿಕ ಡಿಯೋನ್ ಮೈರ್ಸ್ 34 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಲ್ಲದೆ ಕೊನೆಯಲ್ಲಿ ಫರಾಜ್ ಅಕ್ರಮ್ 27 ರನ್ ಬಾರಿಸಿದ್ದು ಹೊರತುಪಡಿಸಿದರೆ ಜಿಂಬಾಬ್ವೆ ತಂಡದಿಂದ ಹೆಚ್ಚು ಪ್ರತಿರೋಧ ಬರಲಿಲ್ಲ. ಇನ್ನೂ 9 ಎಸೆತಗಳು ಇರುವಂತೆಯೇ ಆಲ್ಔಟ್ ಆಯಿತು. ಭಾರತ ಪರ ಬೌಲಿಂಗ್ನಲ್ಲಿ ಮುಕೇಶ್ ಕುಮಾರ್ 22 ರನ್ಗಳಿಎ 4 ವಿಕೆಟ್ ಉರುಳಿಸಿದರೆ ಶಿವಂ ದುಬೆ 2 ವಿಕೆಟ್ ತಮ್ಮದಾಗಿಸಿಕೊಂಡರು.
ಪಂದ್ಯಶ್ರೇಷ್ಠ: ಶಿವಂ ದುಬೆ
ಸರಣಿ ಶ್ರೇಷ್ಠ: ವಾಷಿಂಗ್ಟನ್ ಸುಂದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.