ಭಾರತದಲ್ಲಿ ಇಂಗಾಲದ ಪ್ರಮಾಣ ಶೇ.35ರಷ್ಟು ತಗ್ಗಿಸುವ ಗುರಿಯಿದೆ: ಮೋದಿ
Team Udayavani, Nov 22, 2020, 6:04 AM IST
ಗಾಂಧೀನಗರ: ಭಾರತದಲ್ಲಿ ಇಂಗಾಲದ ಹೊರಸೂಸುವಿಕೆ ಪ್ರಮಾಣವನ್ನು ಶೇ.30-35ರಷ್ಟು ತಗ್ಗಿಸುವ ಉದ್ದೇಶವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ವಿಶ್ವ ವಿದ್ಯಾನಿಲಯದ ಘಟಿಕೋತ್ಸವದಲ್ಲಿ ಆನ್ಲೈನ್ ಮೂಲಕ ಮಾಡಿದ ಭಾಷಣದಲ್ಲಿ ಈ ವಿಷಯ ಪ್ರಸ್ತಾವಿಸಿದರು.
ಈ ದಶಕದಲ್ಲಿ ಜೈವಿಕ ಅನಿಲ ಬಳಕೆಯನ್ನು 4 ಪಟ್ಟು ಹೆಚ್ಚಿಸುವ, ಹಾಗೆಯೇ ತೈಲಸಂಸ್ಕರಣೆ ಪ್ರಮಾಣವನ್ನು ಮುಂದಿನ ಐದು ವರ್ಷಗಳಲ್ಲಿ ದುಪ್ಪಟ್ಟು ಮಾಡುವ ಗುರಿಯಿದೆ. ಪ್ರಸ್ತುತ ಸೌರವಿದ್ಯುತ್ನ ಒಂದು ಘಟಕದ ಖರ್ಚು 2 ರೂ.ಗಳಾಗಿದೆ. ಹಿಂದೆ ಅದು 12ರಿಂದ 13 ರೂ.ಗಳಾಗಿತ್ತು. ಈಗ ಸೌರವಿದ್ಯುತ್ ದೇಶದ ಆದ್ಯತೆಯಾಗಿ ಬದಲಾಗಿದೆ. 2022ರೊಳಗೆ 175 ಗಿಗಾವ್ಯಾಟ್ ಸೌರವಿದ್ಯುತ್ ಉತ್ಪಾದಿಸುವ ಗುರಿಯಿದೆ. ಈ ಪ್ರಮಾಣ 2030ಕ್ಕೆ 450 ಗಿಗಾವ್ಯಾಟ್ ಆಗಲಿದೆ ಎಂಬ ಖಚಿತ ಭರವಸೆಯಿದೆ ಎಂದು ಮೋದಿ ಹೇಳಿದ್ದಾರೆ.
ಇದೇ ವೇಳೆ, ಸ್ವಾತಂತ್ರ್ಯ ಹೋರಾಟದ ವೇಳೆ ಜನರ ತ್ಯಾಗ, ಬಲಿದಾನಗಳನ್ನು ಈಗಿನ ವಿದ್ಯಾರ್ಥಿಗಳು ಸ್ಮರಿಸಿಕೊಳ್ಳಬೇಕು. ಆತ್ಮನಿರ್ಭರ ಭಾರತಕ್ಕಾಗಿಯೂ ಅಂತಹದ್ದೇ ತ್ಯಾಗಬಲಿದಾನಗಳು ಬೇಕಾಗಿದೆ. ಏನೂ ಬದಲಾಗಲ್ಲ ಎಂಬ ನಿರಾಶಾವಾದ ಮೊದಲು ತೊಲಗಬೇಕು ಎಂದು ಪ್ರಧಾನಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.