ಭಾರೀ ಇಳಿಕೆ: ಭಾರತದಲ್ಲಿ 24ಗಂಟೆಯಲ್ಲಿ 13,615 ಕೋವಿಡ್ ಪ್ರಕರಣ ಪತ್ತೆ, 20 ಸಾವು
ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.50ರಷ್ಟಿದೆ
Team Udayavani, Jul 12, 2022, 10:40 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,615 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 20 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25, 474ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜುಲೈ 12) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಲಂಕಾದಿಂದ ಪರಾರಿಯಾಗಲು ಯತ್ನಿಸಿ ವಿಮಾನ ನಿಲ್ದಾಣದಿಂದ ವಾಪಸ್ ಆದ ಗೊಟಬಯಾ ಸಹೋದರ!
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,31,043ಕ್ಕೆ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 13,265 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,29,96,427ಕ್ಕೆ ತಲುಪಿದೆ.
24ಗಂಟೆಯಲ್ಲಿ 330 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.50ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ.
ಭಾರತದಾದ್ಯಂತ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 199 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.3.23ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.4.24ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.