ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 6,650 ಕೋವಿಡ್ ಪ್ರಕರಣ ಪತ್ತೆ, 374 ಮಂದಿ ಸಾವು
ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,79,133ಕ್ಕೆ ಏರಿಕೆ
Team Udayavani, Dec 24, 2021, 10:38 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 6,650 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,72,626ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಡಿಸೆಂಬರ್ 24) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ವಾಟ್ಸಪ್ ಗ್ರೂಪ್ ಮೂಲಕ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ 1.5 ಕೋಟಿ ಸಂಗ್ರಹ
ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 374 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,79,133ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಕೇರಳದಲ್ಲಿ 2,514 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 1,179, ತಮಿಳುನಾಡು 607, ಪಶ್ಚಿಮಬಂಗಾಳದಲ್ಲಿ 516 ಹಾಗೂ ಕರ್ನಾಟಕದಲ್ಲಿ 299 ಪ್ರಕರಣಗಳು ಪತ್ತೆಯಾಗಿದೆ. ಈ ಐದು ರಾಜ್ಯಗಳಲ್ಲಿ ಒಟ್ಟು ಶೇ.76.92ರಷ್ಟು ಹೊಸ ಪ್ರಕರಣಗಳು ವರದಿಯಾಗಿದ್ದು, ಕೇರಳ ರಾಜ್ಯದಲ್ಲಿ ಶೇ.37.8ರಷ್ಟು ಪ್ರಕರಣ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
24ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ 323 ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, ಮಹಾರಾಷ್ಟ್ರದಲ್ಲಿ 17 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 7,051 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಒಟ್ಟು ಕೋವಿಡ್ ನಿಂದ 3,42,15,977 ಮಂದಿ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.