ಭಾರತದಲ್ಲಿ 24ಗಂಟೆಗಳಲ್ಲಿ 11,850 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,63,245ಕ್ಕೆ ತಲುಪಿದೆ.
Team Udayavani, Nov 13, 2021, 10:49 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 11,850 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೇ 274 ದಿನಗಳ ಬಳಿಕ ಮತ್ತೊಮ್ಮೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಪುನೀತ್ ರಿಂದ ಪ್ರೇರೇಪಣೆ, ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿಗಳು
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,36,308ಕ್ಕೆ ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 555 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,63,245ಕ್ಕೆ ತಲುಪಿದೆ.
24ಗಂಟೆಗಳಲ್ಲಿ 12,403 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಈವರೆಗೆ 3,38,26,483 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ 12,516ರಷ್ಟು ಕೋವಿಡ್ ಪ್ರಕರಣ ಹೆಚ್ಚಳವಾಗಿತ್ತು.
ಶುಕ್ರವಾರ(ನವೆಂಬರ್ 12) 58 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, ಇದರೊಂದಿಗೆ ದೇಶದಲ್ಲಿ 111 ಕೋಟಿ ಡೋಸ್ ದಾಖಲೆ ಪ್ರಮಾಣದ ಕೋವಿಡ್ ಲಸಿಕೆ ನೀಡಿದಂತಾಗಿದೆ ಎಂದು ಅಂಕಿಅಂಶ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.