ಸೋಮವಾರ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ : ಹಲವು ಒಪ್ಪಂದಗಳಿಗೆ ಸಹಿ ಸಾಧ್ಯತೆ
Team Udayavani, Dec 5, 2021, 9:15 PM IST
ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಸೋಮವಾರ ಭಾರತಕ್ಕೆ ಭೇಟಿ ನೀಡಲಿದ್ದು, ವ್ಯಾಪಾರ, ಇಂಧನ, ಸಂಸ್ಕೃತಿ, ರಕ್ಷಣೆ, ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವು ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಲಿವೆ. ಅದರಲ್ಲೂ ವಿಶೇಷವಾಗಿ ಭಾರತದಲ್ಲೇ ಎಕೆ-203 ರೈಫಲ್‌ಗಳ ತಯಾರಿಕೆಗೆ ರಷ್ಯಾದ ಸಹಭಾಗಿತ್ವ ಪಡೆಯುವ ಒಪ್ಪಂದಕ್ಕೂ ಸಹಿ ಬೀಳಲಿದೆ. ಈ ಮೂಲಕ ಭಾರತ ಮತ್ತು ರಷ್ಯಾ ನಡುವಿನ ಹಳೆಯ ಸ್ನೇಹವನ್ನು ಇನ್ನಷ್ಟು ಗಟ್ಟಿಗೊಳಿಸಲು ಉಭಯ ದೇಶಗಳು ಸಜ್ಜಾಗಿವೆ.
ಅಲ್ಲದೆ, ಎಲ್‌ಎಸಿಯಲ್ಲಿ ಚೀನಾ ದುಸ್ಸಾಹಸಕ್ಕೆ ಕೈಹಾಕುತ್ತಾ ಭಾರತವನ್ನು ಕೆಣಕುತ್ತಿರುವ ಹಿನ್ನೆಲೆಯಲ್ಲಿ ಪುಟಿನ್ ಅವರ ಈ ಅಲ್ಪಾವಧಿಯ ಭೇಟಿ ಮಹತ್ವ ಪಡೆದಿದೆ.
ರೆಸಿಪ್ರೋಕಲ್ ಎಕ್ಸ್‌ಚೇಂಜ್ ಆಫ್ ಲಾಜಿಸ್ಟಿಕ್ಸ್ ಅಗ್ರೀಮೆಂಟ್(ರೀಲೋಸ್)ಗೆ ಕೂಡ ಭಾರತ ಮತ್ತು ರಷ್ಯಾ ಸಹಿ ಹಾಕುವ ನಿರೀಕ್ಷೆಯಿದೆ. ಈ ಒಪ್ಪಂದ ನಡೆದರೆ, ಎರಡೂ ದೇಶಗಳ ಸೇನೆಗಳು ಬೇರೊಂದು ನೆಲದಲ್ಲಿ ಕಾರ್ಯನಿರ್ವಹಿಸುವ ವೇಳೆ ಪರಸ್ಪರ ಇಂಧನ ಹಾಗೂ ಇತರೆ ಸೌಕರ್ಯಗಳ ನೆರವು ಪಡೆಯಲು ಅನುಕೂಲವಾಗಲಿದೆ.
ರಷ್ಯಾದಿಂದ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಖರೀದಿಸಲು ಭಾರತ ಮುಂದಾಗಿರುವುದಕ್ಕೆ ಅಮೆರಿಕ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಆದರೂ, ರಕ್ಷಣಾ ಸಾಮಗ್ರಿಗಳ ಖರೀದಿಯಲ್ಲಿ ವ್ಯೂಹಾತ್ಮಕ ಸ್ವಾಯತ್ತತೆಯನ್ನು ಮುಂದುವರಿಸುವುದಾಗಿ ಭಾರತ ಸ್ಪಷ್ಟಪಡಿಸಿದೆ.
ಪುಟಿನ್ ಅವರು ಸೋಮವಾರ ಬೆಳಗ್ಗೆ ಭಾರತಕ್ಕೆ ಬಂದಿಳಿದು, ಪ್ರಧಾನಿ ಮೋದಿ ಅವರು ಆಯೋಜಿಸಿರುವ ಔತಣಕೂಟದಲ್ಲಿ ಪಾಲ್ಗೊಂಡು ರಾತ್ರಿಯೇ ರಷ್ಯಾಗೆ ಮರಳಲಿದ್ದಾರೆ. ಕೊರೊನಾ ಸೋಂಕು ವ್ಯಾಪಿಸಲು ಆರಂಭವಾದ ಬಳಿಕ ಪುಟಿನ್ ಅವರ ಎರಡನೇ ವಿದೇಶ ಭೇಟಿ ಇದಾಗಿದೆ.
ಇದನ್ನೂ ಓದಿ : ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.