ದಿಢೀರ್ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 30,549 ಕೋವಿಡ್ ಪ್ರಕರಣ ಪತ್ತೆ
ಇದು ಕಳೆದ 132 ದಿನಗಳ ಬಳಿಕ ಪತ್ತೆಯಾದ ಕಡಿಮೆ ಪ್ರಮಾಣದ ಪ್ರಕರಣವಾಗಿತ್ತು ಎಂದು ವರದಿ ಹೇಳಿದೆ.
Team Udayavani, Aug 3, 2021, 10:58 AM IST
ನವದೆಹಲಿ:ಭಾರತದಲ್ಲಿ ದಿಢೀರ್ ಏರಿಕೆ ಕಂಡಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, 30,549 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಆಗಸ್ಟ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ನಿರೋಧಕ ಲಸಿಕೆ: ಮುಂಜಾನೆ 4ಕ್ಕೇ ಕೇಂದ್ರದ ಮುಂದೆ ಸಾಲು!
ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಸೋಂಕಿನಿಂದ 422 ಮಂದಿ ಸಾವನ್ನಪ್ಪಿದ್ದು, 38,887 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,17,26,507ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ 4,25,195ಕ್ಕೆ ತಲುಪಿದೆ.
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇದೀಗ 4,04,958ಕ್ಕೆ ಇಳಿಕೆಯಾಗಿದೆ. ಸೋಮವಾರ (ಆಗಸ್ಟ್ 02) ಸಕ್ರಿಯ ಪ್ರಕರಣಗಳ ಸಂಖ್ಯೆ 4,13,718ರಷ್ಟಿತ್ತು ಎಂದು ಅಂಕಿಅಂಶ ವಿವರಿಸಿದೆ. ಕಳೆದ ಆರು ದಿನಗಳಲ್ಲಿ ಭಾರತದಲ್ಲಿ 40 ಸಾವಿರಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.
ಜುಲೈ 27ರಂದು ದೇಶದಲ್ಲಿ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗಿತ್ತು. ಇದು ಕಳೆದ 132 ದಿನಗಳ ಬಳಿಕ ಪತ್ತೆಯಾದ ಕಡಿಮೆ ಪ್ರಮಾಣದ ಪ್ರಕರಣವಾಗಿತ್ತು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.