ಭಾರತದಲ್ಲಿ 24ಗಂಟೆಯಲ್ಲಿ 12,847 ಕೋವಿಡ್ ಪ್ರಕರಣ ದೃಢ, 14 ಮಂದಿ ಸಾವು
ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,817ಕ್ಕೆ ಏರಿಕೆಯಾಗಿದೆ.
Team Udayavani, Jun 17, 2022, 11:41 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 12,847 ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,70,577ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜೂನ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಭ್ರಷ್ಟಾಚಾರ ಆರೋಪ: ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ ಸಿಬಿಐ ದಾಳಿ
ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದಾಗಿ 14 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,817ಕ್ಕೆ ಏರಿಕೆಯಾಗಿದೆ. ಕೋವಿಡ್ ಚೇತರಿಕೆ ಪ್ರಮಾಣ ಶೇ.98.64ರಷ್ಟಿದೆ.
24ಗಂಟೆಯಲ್ಲಿ ದೇಶದಲ್ಲಿ 4,848 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.47ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ.2.41ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಈವರೆಗೆ ಒಟ್ಟು 4,26,82,697 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 195.85 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.