ಭಾರತದಲ್ಲಿ ಮತ್ತೆ ಅಲ್ಪ ಹೆಚ್ಚಳ ಕಂಡ ಕೋವಿಡ್ ಪ್ರಕರಣ; 24ಗಂಟೆಯಲ್ಲಿ 4,575 ಪ್ರಕರಣ ಪತ್ತೆ
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 46,962ಕ್ಕೆ ಇಳಿಕೆಯಾಗಿದೆ
Team Udayavani, Mar 9, 2022, 10:32 AM IST
ನವದೆಹಲಿ: ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದ ಕೋವಿಡ್ ಪ್ರಕರಣ ಕಳೆದ 24ಗಂಟೆಯಲ್ಲಿ ಸ್ವಲ್ಪ ಹೆಚ್ಚಳ ಕಂಡಿದ್ದು, 4,575 ಕೋವಿಡ್ 19 ಪ್ರಕರಣ ವರದಿಯಾಗಿದ್ದು, 145 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಮಾರ್ಚ್ 09) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಉಕ್ರೇನ್ ನಲ್ಲಿ ರಕ್ಷಣೆ ಮಾಡಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಪಾಕಿಸ್ಥಾನದ ಹುಡುಗಿ
ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,15,355ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 46,962ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ 24ಗಂಟೆಯಲ್ಲಿ 2,986 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 7,416 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,24,13,566ಕ್ಕೆ ಏರಿಕೆಯಾಗಿದೆ.
ದೇಶದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.69ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.051ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.62ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.