ಭಾರತದಲ್ಲಿ ಕಳೆದ 24ಗಂಟೆಯಲ್ಲಿ 45,951 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಇಳಿಕೆ
ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನ ಚುರುಕುಗೊಳಿಸಲಾಗಿದೆ ಎಂದು ವರದಿ ಹೇಳಿದೆ.
Team Udayavani, Jun 30, 2021, 9:48 AM IST
ನವದೆಹಲಿ:ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರಗತಿಯಲ್ಲಿ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ನೂತನ ಕೋವಿಡ್ ಪ್ರಕರಣಗಳ ಸಂಖ್ಯೆ ಸ್ವಲ್ಪ ಹೆಚ್ಚಳವಾಗಿದ್ದು, 45,951 ಪ್ರಕರಣ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ(ಜೂನ್ 30) ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕುಟುಂಬ ಸಮೇತ ಅಂಜನಾದ್ರಿ ಬೆಟ್ಟದಲ್ಲಿ ದೇವರ ದರ್ಶನ ಪಡೆದ ಸಚಿವ ಯೋಗೇಶ್ಚರ್
ದೇಶದಲ್ಲಿ ಪ್ರಸ್ತುತ 5,37,064 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಅಲ್ಲದೇ ಕಳೆದ 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 817 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 60,729 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ವಿವರಿಸಿದೆ.
ಭಾರತದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,94,27,330 ಜನರು ಗುಣಮುಖರಾಗಿದ್ದಾರೆ. ಈವರೆಗೆ ದೇಶದಲ್ಲಿ ಕೋವಿಡ್ ನಿಂದ 3,98,454 ಮಂದಿ ಸಾವನ್ನಪ್ಪಿದ್ದಾರೆ.
ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ದೇಶದಲ್ಲಿ 33.28 ಕೋಟಿ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನ ಚುರುಕುಗೊಳಿಸಲಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.