ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,919 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಏರಿಕೆ
ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,64,623ಕ್ಕೆ ಏರಿಕೆ
Team Udayavani, Nov 18, 2021, 10:55 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 11,919 ನೂತನ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 470 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ನವೆಂಬರ್ 18) ಬಿಡುಗಡೆ ಮಾಡಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕೆಆರ್‍ಎಸ್ ಸಂಪೂರ್ಣ ಭರ್ತಿ: ನಿಮಿಷಾಂಭ ದೇಗುಲದ ಬಳಿ ನದಿಗೆ ಭಕ್ತರ ಪ್ರವೇಶ ನಿರ್ಬಂಧ
ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,44,78,517ಕ್ಕೆ ತಲುಪಿದ್ದು, ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,64,623ಕ್ಕೆ ಏರಿಕೆಯಾಗಿದೆ ಎಂದು ವರದಿ ಹೇಳಿದೆ.
ಕಳೆದ 24ಗಂಟೆಗಳಲ್ಲಿ ದಾಖಲೆಯ 11,242 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಅಲ್ಲದೇ ಒಂದೇ ದಿನದಲ್ಲಿ 207 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,28,762ಕ್ಕೆ ತಲುಪಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.28ಕ್ಕೆ ಏರಿಕೆಯಾಗಿದೆ. ಇದು 2020 ಮಾರ್ಚ್ ನಂತರದ ಅತೀ ಗರಿಷ್ಠ ಪ್ರಮಾಣದ್ದಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.