ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಾರೀ ಗುಂಡಿನ ಕಾಳಗ: ಸೇನಾ ಅಧಿಕಾರಿ ಹುತಾತ್ಮ
ಆಗಸ್ಟ್ 6ರಂದು ಜಮ್ಮು-ಕಾಶ್ಮೀರದ ಪೊಲೀಸರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು.
Team Udayavani, Aug 19, 2021, 3:26 PM IST
ಜಮ್ಮು: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗುರುವಾರ(ಆಗಸ್ಟ್ 19) ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಭಾರೀ ಗುಂಡಿನ ಕಾಳಗದಲ್ಲಿ ಭಾರತೀಯ ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾದ ಘಟನೆ ನಡೆದಿದೆ.
ವರದಿಯ ಪ್ರಕಾರ, ಉಗ್ರರ ಜತೆಗಿನ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ ಹುತಾತ್ಮರಾಗಿದ್ದಾರೆ. ಉಗ್ರರ ಗುಂಡಿನ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿದ ವೇಳೆ ರಾಷ್ಟ್ರೀಯ ರೈಫಲ್ಸ್ ನ ಕಿರಿಯ ಅಧಿಕಾರಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ತಿಳಿಸಿದ್ದಾರೆ.
ಥಾನಮಂಡಿ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಸಾವನ್ನಪ್ಪಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಆಗಸ್ಟ್ 6ರಂದು ಜಮ್ಮು-ಕಾಶ್ಮೀರದ ಪೊಲೀಸರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು.
ಥಾನಮಂಡಿ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸುವ ವೇಳೆ ಈ ಘಟನೆ ನಡೆದಿದ್ದು, ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.