ಭಾರತ; 7,00,000 ಲಕ್ಷದ ಗಡಿ ದಾಟಿದ ಸಕ್ರಿಯ ಕೋವಿಡ್ ಪ್ರಕರಣ, ಒಮಿಕ್ರಾನ್ 4,033ಕ್ಕೆ ಏರಿಕೆ
ದೇಶಾದ್ಯಂತ ಕೋವಿಡ್ ನಿಂದ ಒಟ್ಟು 3,45,00172 ಮಂದಿ ಗುಣಮುಖರಾಗಿದ್ದಾರೆ.
Team Udayavani, Jan 10, 2022, 10:30 AM IST
Representative Image
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,79,723 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 146 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,83,936ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಜನವರಿ 10) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹಂಬಲ್ ಪೊಲಿಟಿಷಿಯನ್ ನೊಗ್‌ರಾಜ್: ನಕ್ಕು ನಗಿಸುವ ರಾಜಕೀಯ ವಿಡಂಬನೆ
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 7,23,619ಕ್ಕೆ ಹೆಚ್ಚಳವಾಗಿದೆ. 24ಗಂಟೆಯಲ್ಲಿ ಭಾರತದಲ್ಲಿ 1,33,008 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 46,569 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಒಟ್ಟು 3,45,00172 ಮಂದಿ ಗುಣಮುಖರಾಗಿದ್ದಾರೆ.
24 ಗಂಟೆಯಲ್ಲಿ ಭಾರತದಲ್ಲಿ 410 ಒಮಿಕ್ರಾನ್ ಪ್ರಕರಣ ವರದಿಯಾಗಿದ್ದು, ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 4,033ಕ್ಕೆ ಏರಿಕೆಯಾಗಿದೆ. ಇದರಲ್ಲಿ 1,552 ಮಂದಿ ಒಮಿಕ್ರಾನ್ ನಿಂದ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರದಲ್ಲಿ 1,216 ಒಮಿಕ್ರಾನ್ ಪ್ರಕರಣ, ರಾಜಸ್ಥಾನದಲ್ಲಿ 529, ದೆಹಲಿಯಲ್ಲಿ 513, ಕರ್ನಾಟಕದಲ್ಲಿ 441, ಕೇರಳದಲ್ಲಿ 333 ಹಾಗೂ ಗುಜರಾತ್ ನಲ್ಲಿ 236 ಪ್ರಕರಣ ಪತ್ತೆಯಾಗಿದೆ. ಒಟ್ಟು 27 ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.