ಭಾರತದಲ್ಲಿ 24ಗಂಟೆಯಲ್ಲಿ 17,336 ಕೋವಿಡ್ ಪ್ರಕರಣ ದೃಢ: ನಾಲ್ಕು ತಿಂಗಳ ಗರಿಷ್ಠ ಪ್ರಮಾಣ
ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,954ಕ್ಕೆ ಏರಿಕೆಯಾಗಿದೆ.
Team Udayavani, Jun 24, 2022, 10:36 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 17,336 ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದ್ದು, ಇದು ಕಳೆದ ನಾಲ್ಕು ತಿಂಗಳಲ್ಲಿನ ಗರಿಷ್ಠ ಪ್ರಮಾಣದ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜೂನ್ 24) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೈಕ್ ಸರಿಯಾಗಿ ನಿಲ್ಲಿಸಲು ಹೇಳಿದ್ದಕ್ಕೆ ಗಾರ್ಡ್ ಕೊಲೆ: ಫುಡ್ ಡೆಲಿವರಿ ಬಾಯ್ ಸೆರೆ
ಗುರುವಾರಕ್ಕಿಂತ ಶೇ.30ರಷ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 13 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,954ಕ್ಕೆ ಏರಿಕೆಯಾಗಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 88,284ಕ್ಕೆ ಏರಿಕೆಯಾಗಿದೆ. ಕೇವಲ ಒಂದೇ ದಿನದಲ್ಲಿ 4,294 ಸಕ್ರಿಯ ಕೋವಿಡ್ ಪ್ರಕರಣ ಹೆಚ್ಚಳವಾಗಿದೆ. ಐದು ರಾಜ್ಯಗಳಲ್ಲಿ ಅತೀ ಹೆಚ್ಚಿನ ಕೋವಿಡ್ ಪ್ರಕರಣಗಳು ವರದಿಯಾಗಿದೆ.
ಮಹಾರಾಷ್ಟ್ರದಲ್ಲಿ 5,218, ಕೇರಳದಲ್ಲಿ 3,890, ದಿಲ್ಲಿಯಲ್ಲಿ 1,934, ತಮಿಳುನಾಡಿನಲ್ಲಿ 1,063 ಮತ್ತು ಹರ್ಯಾಣದಲ್ಲಿ 872 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮತ್ತು ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.