Intel: ಆರ್ಥಿಕ ಬಿಕ್ಕಟ್ಟು- ಇಂಟೆಲ್ ನ 18,000 ನೌಕರರ ವಜಾ, 20 ಬಿಲಿಯನ್ ವೆಚ್ಚ ಕಡಿತ!
ನಮ್ಮ 2ನೇ ತ್ರೈಮಾಸಿಕ ಆರ್ಥಿಕ ಪ್ರಗತಿ ತುಂಬಾ ನಿರಾಶದಾಯಕವಾಗಿದೆ.
Team Udayavani, Aug 2, 2024, 2:48 PM IST
ಸ್ಯಾನ್ ಫ್ರಾನ್ಸಿಸ್ಕೋ: ಆರ್ಥಿಕ ನಷ್ಟಕ್ಕೆ ಗುರಿಯಾಗಿರುವ ಅನೇಕ ಬೃಹತ್ ಕಂಪನಿಗಳು ಈಗಾಗಲೇ ಉದ್ಯೋಗಿಗಳನ್ನು ಕಡಿತಗೊಳಿಸಿದೆ. ಇದೀಗ ಅದಕ್ಕೊಂದು ಸೇರ್ಪಡೆ ಎಂಬಂತೆ ಅಮೆರಿಕದ ಪ್ರತಿಷ್ಠಿತ ಚಿಪ್ (Chip) ತಯಾರಿಕಾ ಕಂಪನಿ ಇಂಟೆಲ್ ಶೇ.15ಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ವರದಿ ತಿಳಿಸಿದೆ.
ಇತ್ತೀಚೆಗೆ ಕೊನೆಗೊಂಡ ತ್ರೈಮಾಸಿಕ ವರದಿಯಲ್ಲಿ ಇಂಟೆಲ್ ಕಾರ್ಪೋರೇಶನ್ ಬರೋಬ್ಬರಿ 1.6 ಬಿಲಿಯನ್ ಡಾಲರ್ ನಷ್ಟ ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 20 ಬಿಲಿಯನ್ ಡಾಲರ್ ನಷ್ಟು ಬೃಹತ್ ಮೊತ್ತವನ್ನು ಕಡಿತಗೊಳಿಸಲು ಚಿಂತನೆ ನಡೆಸಿರುವುದಾಗಿ ವರದಿ ವಿವರಿಸಿದೆ.
“ ನಮ್ಮ 2ನೇ ತ್ರೈಮಾಸಿಕ ಆರ್ಥಿಕ ಪ್ರಗತಿ ತುಂಬಾ ನಿರಾಶದಾಯಕವಾಗಿದ್ದು, ನಮ್ಮ ಪ್ರಮುಖ ಉತ್ಪಾದನೆ ಮತ್ತು ತಾಂತ್ರಿಕ ಪ್ರಗತಿಯ ಗುರಿ ಮುಟ್ಟುವಲ್ಲಿ ವಿಫಲವಾಗಿರುವುದಾಗಿ ಇಂಟೆಲ್ ನ ಚೀಫ್ ಎಕ್ಸಿಕ್ಯೂಟಿವ್ ಪ್ಯಾಟ್ ಗೆಲ್ಸಿಂಗರ್” ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಂಪನಿಯ ವೆಚ್ಚವನ್ನು ಕಡಿತಗೊಳಿಸುವ ಮೂಲಕ ನಮ್ಮ ಲಾಭವನ್ನು ಸುಧಾರಿಸುವ ಮೂಲಕ ಆರ್ಥಿಕ ಲಾಭವನ್ನು ಬಲಗೊಳಿಸಲು ಉದ್ಯೋಗಿಗಳನ್ನು ಕಡಿತಗೊಳಿಸಲು ಮುಂದಾಗಿರುವುದಾಗಿ ಇಂಟೆಲ್ ತಿಳಿಸಿದೆ.
ಇಂಟೆಲ್ ವರದಿಯ ಪ್ರಕಾರ, ಕಳೆದ ವರ್ಷ 1,24,800 ಸಾವಿರ ಉದ್ಯೋಗಿಗಳನ್ನು ಹೊಂದಿದೆ. ಅಂದರೆ ಸುಮಾರು 18,000 ಉದ್ಯೋಗಿಗಳು ವಜಾಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.
ಜೂನ್ ನಲ್ಲಿ ಇಸ್ರೇಲ್ ನಲ್ಲಿ ಪ್ರಾರಂಭವಾಗಬೇಕಿದ್ದ ಪ್ರಮುಖ ಫ್ಯಾಕ್ಟರಿ ಯೋಜನೆಯನ್ನು ಕೈಬಿಡುವುದಾಗಿ ಇಂಟೆಲ್ ಘೋಷಿಸಿತ್ತು. ಈ ಚಿಪ್ ಪ್ಲ್ಯಾಂಟ್ ಗೆ ಹೆಚ್ಚುವರಿ 15 ಬಿಲಿಯನ್ ಡಾಲರ್ ವ್ಯಯಿಸಬೇಕಾಗಿತ್ತು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.