ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ
Team Udayavani, Jun 15, 2021, 7:45 PM IST
ಬೆಂಗಳೂರು: ಇದೇ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುವಲ್ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಮಂಗಳವಾರ ಬೆಂಗಳೂರಿನಲ್ಲಿ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು ಕೋವಿಡ್ ಕಾರಣದಿಂದ ಈ ವರ್ಷದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜ್ಯದಲ್ಲಿ ಅತ್ಯಂತ ಸರಳವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಕೇವಲ 100 ಜನರು ಮಾತ್ರ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ : ಅಮೆರಿಕದಲ್ಲಿ ಗ್ರಾಹಕ ವಲಯ ಕೇಂದ್ರೀತ ಎಸ್‌ಪಿಎಸಿ ಪ್ರಾರಂಭಿಸಿದ ಮಣಿಪಾಲ್ ಗ್ರೂಪ್ ಅಧ್ಯಕ್ಷ
ಈ ವರ್ಷದ ಯೋಗ ದಿನಾಚರಣೆ ಕ್ರೀಡಾ ಮತ್ತು ಯುವಜನ ಸಬಲೀಕರಣ, ನಿಮ್ಹಾನ್ಸ್, ಪರಿವರ್ತನಾ ಯೋಗಾ ಪ್ರತಿಷ್ಠಾನ ಹಾಗೂ ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ನಡೆಯಲಿದೆ. ಸೋಂಕಿನ ಕಾಯಿಲೆ ಇರುವ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ʼಕೋವಿಡ್-19, ಯುವಜನರು, ಯೋಗ, ಧ್ಯಾನʼ ಎಂಬ ಶೀರ್ಷಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಚಿವ ನಾರಾಯಣಗೌಡ ಅವರು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಶಾಸಕ ಗೋವಿಂದರಾಜು, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.