ಮುಂಬಯಿಯಲ್ಲಿ ಐಪಿಎಲ್ ಪಂದ್ಯಾವಳಿ ನಡೆಸಲು ಅನುಮತಿ: ಸಚಿವ ನವಾಬ್‌ ಮಲಿಕ್‌


Team Udayavani, Apr 6, 2021, 7:00 AM IST

ಮುಂಬಯಿಯಲ್ಲಿ ಐಪಿಎಲ್ ಪಂದ್ಯಾವಳಿ ನಡೆಸಲು ಅನುಮತಿ: ಸಚಿವ ನವಾಬ್‌ ಮಲಿಕ್‌

ಮುಂಬಯಿ : ಕೊರೊನಾದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಐಪಿಎಲ್‌ ಪಂದ್ಯಗಳ ಆಯೋಜನೆ ಡೋಲಾಯಮಾನವಾಗಿತ್ತು. ಇದಕ್ಕೀಗ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಮುಂಬಯಿಯಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್‌ ಪಂದ್ಯಗಳ ಆಯೋಜನೆ ಕುರಿತು ಅನುಮಾನ ಹುಟ್ಟಿಕೊಂಡಿತ್ತು. ಇದೇ ವಿಚಾರವಾಗಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಮುಂಬಯಿಯಲ್ಲಿ ಪಂದ್ಯಗಳ ಆಯೋಜನೆಗೆ ಪಟ್ಟು ಹಿಡಿದಿದ್ದರು. ಅನಂತರದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರಕಾರ ಮುಂಬಯಿಯಲ್ಲಿ ಪಂದ್ಯಗಳನ್ನು ನಡೆಸಲು ಷರತ್ತುಬದ್ಧ ಅನುಮತಿ ನೀಡಿತು.

ಬಿಸಿಸಿಐ ಲಿಖೀತ ಒಪ್ಪಿಗೆ
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಮಲಿಕ್‌ “ಐಪಿಎಲ್ ಪಂದ್ಯಗಳು ವೇಳಾಪಟ್ಟಿಯಂತೆ ಮುಂಬ ಯಿಯಲ್ಲಿ ನಡೆಯಲಿವೆ. ಇದಕ್ಕೆ ಯಾವುದೇ ಅಡೆತಡೆ ಇರುವುದಿಲ್ಲ. ಕೆಲವು ಷರತ್ತು ಮತ್ತು ನಿರ್ಬಂಧಗಳೊಂದಿಗೆ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ. ಪ್ರೇಕ್ಷಕರಿಗೆ ಕ್ರೀಡಾಂಗಣ ಪ್ರವೇಶಿಸಲು ಅವಕಾಶವಿರುವುದಿಲ್ಲ. ಐಪಿಎಲ್‌ನಲ್ಲಿ ಭಾಗವಹಿಸುವವರು ಪ್ರತ್ಯೇಕವಾಗಿ ಒಂದೇ ಸ್ಥಳದಲ್ಲಿ ಇರಬೇಕಾಗುತ್ತದೆ. ಗುಂಪುಗೂಡುವಂತಿಲ್ಲ. ಈ ಬಗ್ಗೆ ಬಿಸಿಸಿಐನಿಂದ ಲಿಖೀತ ಒಪ್ಪಿಗೆ ಪಡೆದ ಬಳಿಕ ಅನುಮತಿ ನೀಡಲಾಗಿದೆ’ ಎಂದು ಹೇಳಿದರು.

ವೇಳಾಪಟ್ಟಿಯಂತೆ ಐಪಿಎಲ್‌: ಗಂಗೂಲಿ
ನಿಗದಿತ ವೇಳಾಪಟ್ಟಿಯಂತೆಯೇ ಐಪಿಎಲ್‌ ಟೂರ್ನಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿದ್ದಾರೆ. ಒಮ್ಮೆ ಆಟಗಾರರು, ಸಿಬಂದಿಯೆಲ್ಲ ಜೈವಿಕ ಸುರಕ್ಷಾ ವಲಯ ಪ್ರವೇಶಿಸಿದರೆ ಏನೂ ಸಮಸ್ಯೆ ಇಲ್ಲ. ಕಳೆದ ಸೀಸನ್‌ ಆರಂಭದಲ್ಲೂ ಇಂಥದೇ ಗೊಂದಲಗಳಿದ್ದವು. ಆದರೆ ಒಮ್ಮೆ ಟೂರ್ನಿ ಆರಂಭಗೊಂಡ ಬಳಿಕ ಎಲ್ಲವೂ ಚೆನ್ನಾಗಿ ನಡೆಯಲಾರಂಭಿಸಿತು. ಭಾರತದಲ್ಲಿಯೂ ಈ ಕೂಟ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ’ ಎಂದು ಗಂಗೂಲಿ ಹೇಳಿದ್ದಾರೆ.

ಆಟಗಾರರಿಗೆ ಲಸಿಕೆ
ಆಟಗಾರರಿಗೆ ಲಸಿಕೆ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರದ ಆರೋಗ್ಯ ಸಚಿವಾಲಯದೊಂದಿಗೆ ಮಾತುಕತೆ ನಡೆಸಿದೆ. ಅದರಂತೆ ಐಪಿಎಲ್‌ಗ‌ೂ ಮೊದಲೇ ಆಟಗಾರರಿಗೆ ವ್ಯಾಕ್ಸಿನೇಶನ್‌ ಮಾಡಿಸಲು ಮಂಡಳಿ ಸತತ ಪ್ರಯತ್ನ ಮಾಡುತ್ತಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಮಾಹಿತಿ ನೀಡಿದ್ದಾರೆ.

“ಕೊರೊನಾ ವೈರಸ್‌ಗೆ ಲಸಿಕೆ ಪಡೆಯುವುದೊಂದೇ ಪರಿಹಾರ ಎಂದು ನಾನು ಭಾವಿಸುತ್ತೇನೆ. ಬಿಸಿಸಿಐ ಕೂಡ ಈ ಬಗ್ಗೆ ಯೋಚಿಸುತ್ತಿದೆ. ಕೊರೊನಾ ಯಾವಾಗ ಕೊನೆಗೊಳ್ಳುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಆದ್ದರಿಂದ ಈಗಲೇ ಆಟಗಾರರಿಗೆ ಲಸಿಕೆ ನೀಡುವ ಕುರಿತು ಯೋಚಿಸಬೇಕಾಗುತ್ತದೆ’ ಎಂದು ಶುಕ್ಲಾ ಹೇಳಿದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.