“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

ಮಂಗಳೂರಿನ ಐವರು ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು

Team Udayavani, Sep 27, 2024, 6:18 PM IST

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

ಬೆಂಗಳೂರು: “ಭಾರತ್‌ ಮಾತಾ ಕಿ ಜೈ’ ಘೋಷಣೆಯು ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಮಸೀದಿ ಮುಂದೆ ಪ್ರತಿಭಟನೆ ನಡೆಸಿ “ಭಾರತ್‌ ಮಾತಾ ಕಿ ಜೈ’ (Bharat Mata Ki Jai) ಎಂದು ಘೋಷಣೆ ಕೂಗಿದ ಸಂಬಂಧ 2 ಧರ್ಮಗಳ ವಿರುದ್ಧ ದ್ವೇಷ ಹರಡುವ ಆರೋಪದ ಮೇಲೆ ಮಂಗಳೂರಿನ ಐವರು ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಮಂಗಳೂರಿನ ಸುರೇಶ್‌, ಎಂ. ವಿನಯ್‌ ಕುಮಾರ್‌, ಸುಭಾಷ್‌, ರಂಜನ್‌ ಅಲಿಯಾಸ್‌ ರಂಜಿತ್‌ ಮತ್ತು ಧನಂಜಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಈ ಪ್ರಕರಣ ಅರ್ಜಿದಾರರು ಹೂಡಿದ್ದ ಪ್ರಕರಣಕ್ಕೆ ಪ್ರತಿಯಾಗಿ ಹೂಡಿದ್ದ ಪ್ರಕರಣವಾಗಿದೆ, ಇದರಲ್ಲಿ ಸೆಕ್ಷನ್‌ 153ಎ ಅನ್ವಯವಾಗುವ ಒಂದೇ ಒಂದು ಅಂಶವೂ ಇಲ್ಲ. ವಾಸ್ತವವಾಗಿ ಧರ್ಮ, ಭಾಷೆ ಸೇರಿದಂತೆ ನಾನಾ ಅಂಶಗಳನ್ನು ಮುಂದಿಟ್ಟುಕೊಂಡು ಬೇರೆ ಬೇರೆ ಗುಂಪುಗಳ ನಡುವೆ ದ್ವೇಷ ಭಾವನೆ ಮೂಡಿಸುವ ಘಟನೆ ನಡೆದಿರ ಬೇಕಾಗುತ್ತದೆ. ಆದರೆ ಇಲ್ಲಿ ಅಂತಹ ಘಟನೆ ನಡೆದಿಲ್ಲ. ಈ ಪ್ರಕರಣ ಐಪಿಸಿ ಸೆಕ್ಷನ್‌ 153ರ ದುರ್ಬಳಕೆಗೆ ತಾಜಾ ಉದಾಹರಣೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದು ದೂರು-ಪ್ರತಿದೂರಿನ ಪ್ರಕರಣ, ಅರ್ಜಿ ದಾರರು ಕೇವಲ ಭಾರತ್‌ ಮಾತಾ ಕಿ ಜೈ ಎಂದು ಘೋಷಣೆ ಕೂಗಿದ್ದಾರೆ ಹಾಗೂ ಪ್ರಧಾನಮಂತ್ರಿ ಯನ್ನು ಹೊಗಳಿದ್ದಾರೆ. ದೂರಿನಲ್ಲೂ ಯಾವ ಅಂಶಗಳನ್ನೂ ಉಲ್ಲೇಖೀಸಿಲ್ಲ. ಹಾಗಾಗಿ ಪ್ರಕರಣ ರದ್ದು ಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ಹೇಳಿದೆ.
ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖೀಸಿರುವ ನ್ಯಾಯಾಲಯ, ವಾಸ್ತವ ಅಂಶಗಳನ್ನು ಪರಿಗಣಿಸಿದರೆ ಭಾರತ್‌ ಮಾತಾ ಕಿ ಘೋಷಣೆ ಕೂಗಿರುವುದು ಕೇವಲ ಸಾಮರಸ್ಯ ಉತ್ತೇಜಿಸುತ್ತದೆಯೇ ಹೊರತು ದ್ವೇಷವನ್ನಲ್ಲ ಎಂದು ಹೇಳಿ ಪ್ರಕರಣವನ್ನು ರದ್ದುಗೊಳಿಸಿ ಆದೇಶ ನೀಡಿದೆ.

ಮಂಗಳೂರಿನ ಕೊಣಾಜೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜೂ. 9ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕಾರ ಸ್ವೀಕಾರ ಸಮಾರಂಭ ವೀಕ್ಷಣೆ ಬಳಿಕ ವಾಪಸಾಗುತ್ತಿದ್ದ ಕೆಲವರು “ಭಾರತ್‌ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದರು. ಅದನ್ನು ಪ್ರಶ್ನಿಸಿದವರನ್ನು ಬೆದರಿಸಲಾಗಿತ್ತು ಎಂದು ದೂರು ದಾಖಲಾಗಿತ್ತು. ಆರೋಪಿಗಳ ಪರವಾಗಿ ನ್ಯಾಯವಾದಿ ಅರುಣ್‌ಶ್ಯಾಂ ಪುತ್ತೂರು, ಸುಯೋಗ್‌ ಹೇರಳೆ ವಾದಿಸಿದ್ದರು.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.