ಜಿಲ್ಲಾ ಮಟ್ಟದಲ್ಲಿ ಹಿಂದುಳಿದ ವರ್ಗದವರ ಸಮಾವೇಶ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲು ತೀರ್ಮಾನ
Team Udayavani, Dec 20, 2022, 6:45 AM IST
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಈಗ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಸಜ್ಜಾಗಿದೆ.
ಜ.15ರಿಂದ ಫೆ.15ರ ವರೆಗೆ ರಾಜ್ಯವ್ಯಾಪಿಯಾಗಿ ಜಿಲ್ಲಾಮಟ್ಟದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಕೈಗೆ ಮತ್ತಷ್ಟು ಬಲ ತುಂಬಲು ಮುಂದಾಗಿದೆ.
ಜತೆಗೆ ಈ ಜಿಲ್ಲಾ ಸಮಾವೇಶಗಳು ಮುಗಿದ ಬಳಿಕ ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗದವರ ಬೃಹತ್ ಸಮಾವೇಶ ಆಯೋಜಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲು ತೀರ್ಮಾನಿಸಿದೆ.
ಸುಮಾರು 8ರಿಂದ 10 ಲಕ್ಷ ಜನರನ್ನು ಸಮಾವೇಶಕ್ಕೆ ಕರೆತರುವ ನಿಟ್ಟಿನಲ್ಲಿ ಕೂಡ ಸಿದ್ಧತೆ ನಡೆಸಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಿಂದುಳಿದ ವರ್ಗದವರ ಬೃಹತ್ ಸಮಾವೇಶ ಆಯೋಜನೆ ಮಾಡಿ ಶಕ್ತಿ ಪ್ರದರ್ಶನಕ್ಕೆ ನಿರ್ಧರಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ರಾಜ್ಯದಲ್ಲಿ ಶೇ.55ರಷ್ಟು ಮಂದಿ ಹಿಂದುಳಿದ ವರ್ಗದವರಿದ್ದಾರೆ. ಅವರು ಹಿಂದಿನಿಂದಲೂ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಕಾಂಗ್ರೆಸ್ ಬಿಟ್ಟು ಹೋಗಿರುವ ಒಬಿಸಿ ಮತದಾರರನ್ನು ಒಂದಾಗಿ ಕರೆದುಕೊಂಡು ಹೋಗುವ ನಿಟ್ಟಿನಲ್ಲಿ ಹಿಂದುಳಿದ ವರ್ಗದವರ ಸಮಾವೇಶ ಹಮ್ಮಿಕೊಳ್ಳಲಾಗಿದೆ ತೀರ್ಮಾನಿಸಲಾಗಿದೆ ಎಂದರು.
ರಾಹುಲ್ ಗಾಂಧಿ ಉಪಸ್ಥಿತಿ
ಹಿರಿಯ ಮುಖಂಡ ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಭಾಗವಹಿಸುವ ಭರವಸೆ ನೀಡಿದ್ದಾರೆ. ಫೆಬ್ರವರಿ ತಿಂಗಳ ಅಂತ್ಯದಲ್ಲಿ ಇಲ್ಲವೆ ಮಾರ್ಚ್ ಮೊದಲ ವಾರದಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸಮ್ಮುಖದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಭಾಗದ ಜಿಲ್ಲಾವಾರು ಘಟಕದ ಪದಾಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಮುಂತಾದವರು ಉಪಸ್ಥಿತರಿದ್ದರು.
ಕೆಪಿಸಿಸಿ ಚುನಾವಣ ಸಮಿತಿಗೆ ಸೇರ್ಪಡೆ: ಸಿದ್ದು ಆಪ್ತರಿಗೆ ಮಣೆ?
ಬೆಂಗಳೂರು: ಕೆಪಿಸಿಸಿ ಚುನಾವಣ ಸಮಿತಿಗೆ ಮತ್ತೆ 11 ಮಂದಿ ಪ್ರಮುಖರ ಹೆಸರುಗಳನ್ನು ಸೇರಿಸಲಾಗಿದೆ. ಈ ಹಿಂದೆ 36 ಸದಸ್ಯರನ್ನಷ್ಟೇ ನೇಮಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತರಿಗಷ್ಟೇ ಆದ್ಯತೆ ನೀಡಲಾಗಿದೆ ಎಂದು ಆರೋಪ ಕೇಳಿ ಬಂದಿತ್ತು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತರನ್ನು ದೂರ ಇರಿಸಲಾಗಿದೆ ಎಂದು ಮಾತು ಕೇಳಿ ಬಂದು ಅಸಮಾಧಾನ ಉಂಟಾಗಿತ್ತು. ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಈಗ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಜಮೀರ್ ಅಹ್ಮದ್ ಖಾನ್, ಮಾಜಿ ಶಾಸಕಿ ಉಮಾಶ್ರೀ, ಬಿ.ಎಲ್ ಶಂಕರ್, ಮಾಜಿ ಸಚಿವರಾದ ಪರಮೇಶ್ವರ್ ನಾಯ್ಕ…, ರಮಾನಾಥ ರೈ, ಎಚ್.ಎಂ.ರೇವಣ್ಣ, ಎ.ಎಚ್ ಹಿಂಡಸಗೇರಿ , ಶಿವಾನಂದ ಪಾಟೀಲ್, ಶರಣಬಸಪ್ಪ ಗೌಡ ದರ್ಶನಾಪುರ, ಶರಣ್ ಪ್ರಕಾಶ್ ಪಾಟೀಲ್ ಹೆಸರನ್ನು ಸೇರ್ಪಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.