ಅದಲು ಬದಲಾದವರದ್ದೇ ಆಟ

Team Udayavani, May 5, 2023, 7:15 AM IST

bjp jds cong

ಹಾಸನ: ಸತತ ಮೂರು ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಕೆ.ಎಂ.ಶಿವಲಿಂಗೇಗೌಡ ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧೆಗಿಳಿದಿದ್ದರೆ, ಕೊನೆ ಗಳಿಗೆವರೆಗೆ ಹೋರಾಡಿದರೂ ಬಿಜೆಪಿ ಟಿಕೆಟ್‌ ವಂಚಿತ ರಾದ ಎನ್‌.ಆರ್‌.ಸಂತೋಷ್‌ ಜೆಡಿಎಸ್‌ ಅಭ್ಯರ್ಥಿ. ಬಿಜೆಪಿ ಸರಕಾರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿದ್ದ ಜಿ.ವಿ.ಬಸವರಾಜು ಬಿಜೆಪಿ ಅಭ್ಯರ್ಥಿಯಾಗಿ ದ್ದಾರೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯಿದ್ದಂತೆ ಕಂಡರೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳ ನಡುವೆಯೇ ನೇರ ಹಣಾಹಣಿ.

ಹೇಮಾವತಿ ನದಿ ಮೂಲದಿಂದ ಅರಸೀಕೆರೆ ನಗರ ಹಾಗೂ ಗ್ರಾಮಾಂತರದ ಎಲ್ಲ ಹಳ್ಳಿ ಗಳಿಗೂ ಕುಡಿಯುವ ನೀರು ಪೂರೈಕೆ, ಕ್ಷೇತ್ರದಲ್ಲಿ ಕಾಂಕ್ರೀಟ್‌ ರಸ್ತೆಗಳ ನಿರ್ಮಾಣ, ಎತ್ತಿನಹೊಳೆ ಯೋಜನೆಯಿಂದ ಕೆರೆಗಳಿಗೆ ನೀರು ತುಂಬಿಸುವುದೂ ಸಹಿತ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳ ಮೂಲಕವೇ ಕೆ.ಎಂ.ಶಿವಲಿಂಗೇಗೌಡ ಅವರು 4ನೇ ಬಾರಿ ಜನಾಶೀರ್ವಾದ ಬಯಸಿದ್ದಾರೆ. ಗೌಡರ ಕುಟುಂಬದ ವಿರೋಧ ಕಟ್ಟಿಕೊಂಡಿರುವುದರಿಂದ ಒಕ್ಕಲಿಗರ ಮತಗಳ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಲಿಂಗಾಯತ ಮತದಾರರೂ ಕೈ ಹಿಡಿಯುವ ಪರಿಸ್ಥಿತಿ ಯಿಲ್ಲ. ಆದರೆ ಅಹಿಂದ ವರ್ಗಗಳ ಮತದಾರರ ಬಲ ನಂಬಿಕೊಂಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರ ಬಂದ ತತ್‌ಕ್ಷಣದಿಂದಲೇ ಪತ್ನಿಯ ತವರೂರಿನ ಜಾಡು ಹಿಡಿದು ರಾಜಕೀಯ ಭವಿಷ್ಯ ಹುಡುಕಿಕೊಂಡು ಅರಸೀಕೆರೆ ಕ್ಷೇತ್ರದತ್ತ ಬಂದವರು ಎನ್‌.ಆರ್‌.ಸಂತೋಷ್‌. ತಿಪಟೂರು ತಾಲೂಕು ನೊಣವಿನಕೆರೆಯ ಎನ್‌.ಆರ್‌. ಸಂತೋಷ್‌ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಂಬಂಧಿ. ಬಿಎ ಸ್‌ವೈ ಕುಟುಂಬದ ವಿರೋಧ ಕಟ್ಟಿ ಕೊಂಡಿದ್ದರಿಂದ ಬಿಜೆಪಿ ಟಿಕೆಟ್‌ ವಂಚಿತರಾದರು. ಕ್ಷೇತ್ರದಲ್ಲಿ ಬಿಜೆಪಿಯ ಸಂಘಟನೆ, ಸಾಮಾ ಜಿಕ ಕಾರ್ಯಕ್ರಮಗಳ ಮೂಲಕ ಚುನಾವಣೆಗೆ 3 ವರ್ಷಗಳಿಂದಲೂ ಸಂತೋಷ್‌ ಸಜ್ಜಾಗಿದ್ದರು.

ಶಿವಲಿಂಗೇಗೌಡರ ನಿರ್ಗಮನದಿಂದ ಜೆಡಿಎಸ್‌ಗೆ ಪ್ರಬಲ ಕೊರತೆಯಿತ್ತು. ಜಿ.ಪಂ. ಮಾಜಿ ಸದಸ್ಯ, ಕುರುಬ ಸಮುದಾಯದ ಬಾಣಾವರದ ಅಶೋಕ್‌ ಸ್ಪರ್ಧೆಗಿಳಿಸುವ ಆಲೋಚನೆ ಯಲ್ಲಿದ್ದ ಜೆಡಿಎಸ್‌ಗೆ ಎನ್‌.ಆರ್‌.ಸಂತೋಷ್‌ ಬಂದದ್ದು ದಳಪತಿಗಳಿಗೆ ಆನೆ ಬಲ ಸಿಕ್ಕಂತಾ ಗಿದೆ. ಬಿಜೆಪಿಯ ಸಂಬಂಧ, ಲಿಂಗಾಯತರ ಬೆಂಬಲ ಹಾಗೂ ಜೆಡಿಎಸ್‌ ನೆಲಗಟ್ಟಿನಿಂದ ಬಿಜೆಪಿಯಲ್ಲಿದ್ದುದುಕ್ಕಿಂತಲೂ ಎನ್‌.ಆರ್‌.ಸಂತೋಷ್‌ ಈಗ ಶಿವಲಿಂಗೇಗೌಡರಿಗೆ ಪ್ರಬಲ ಎದುರಾಳಿಯಾಗಿ ಕಂಗೆಡಿಸಿದ್ದಾರೆ. ಎನ್‌.ಆರ್‌.ಸಂತೋಷ್‌ ನಿರ್ಗಮನದಿಂದ ಕ್ಷೇತ್ರದಲ್ಲಿ ಬಿಜೆಪಿ ಬಲಹೀನವಾದಂತಿದೆ. ಬಿಜೆಪಿ ಅಭ್ಯರ್ಥಿ ಜಿ.ವಿ.ಬಸವರಾಜು ಅವರು ಕ್ಷೇತ್ರದಲ್ಲಿ ಎಲ್ಲ ಸಮುದಾಯಗಳ ಮತ ಸೆಳೆಯುವಷ್ಟು ಪ್ರಭಾವಿ ನಾಯಕತ್ವ ರೂಪಿಸಿಕೊಂಡವರಲ್ಲ. ಆದರೆ ಲಿಂಗಾಯತರ ಬೆಂಬಲ, ಬಿಜೆಪಿಯ ಸಾಂಪ್ರದಾಯಿಕ ಮತಬ್ಯಾಂಕ್‌ ನಂಬಿದ್ದಾರೆ.

~ ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.