ಹಿಜಾಬ್, ಜೀನ್ಸ್, ಬಿಕಿನಿ ಹೆಣ್ಣು ಮಕ್ಕಳ ಹಕ್ಕು:ಪ್ರಿಯಾಂಕಾ ಗಾಂಧಿ ವಾದ್ರಾ
Team Udayavani, Feb 9, 2022, 12:21 PM IST
ಲಕ್ನೋ : ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾಡಿರುವ ಟ್ವೀಟ್ ಈಗ ಹೊಸದೊಂದು ವಿವಾದವನ್ನು ಸೃಷ್ಟಿಸಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರ ಚರ್ಚೆಯಾಗುತ್ತಿರುವಾಗಲೇ ಟ್ವೀಟ್ ಮಾಡಿರುವ ಪ್ರಿಯಾಂಕಾ ವಾದ್ರಾ “ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಆಯ್ಕೆ ಹಾಗೂ ವಿವೇಚನೆಗೆ ಸಂಬಂಧಪಟ್ಟಿದ್ದು ಎಂದು ಹೇಳಿದ್ದಾರೆ.
ಹೆಣ್ಣು ಮಕ್ಕಳಿಗೆ ಕಿರುಕುಳ ಕೊಡುವುದನ್ನು ನಿಲ್ಲಿಸಿ. ಅವರು ಬಿಕಿನಿಯಾದರೂ ಧರಿಸಲಿ, ಮುಸುಕಾದರೂ ಹಾಕಲಿ, ಜೀನ್ಸ್ ಆದರೂ ಧರಿಸಲಿ ಅಥವಾ ಹಿಜಾಬಾದರೂ ತೊಡಲಿ. ಅದು ಹೆಣ್ಣು ಮಕ್ಕಳ ಹಕ್ಕು. ಯಾವುದನ್ನು ಧರಿಸಬೇಕೆಂಬುದನ್ನು ಅವಳೇ ನಿರ್ಧರಿಸುತ್ತಾಳೆ. ಭಾರತದ ಸಂವಿಧಾನ ಅವಳಿಗೆ ಆ ಹಕ್ಕನ್ನು ನೀಡಿದೆ. ಕಿರುಕುಳ ನಿಲ್ಲಿಸಿʼʼ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಿಯಾಂಕಾ ಗಾಂಧಿಯವರ ಈ ಹೇಳಿಕೆ ಬಿಜೆಪಿ ತಿರುಗೇಟು ನೀಡಿದೆ. ಹಿಜಾಬ್ ಸಂಚಿನ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಾ ಲಭಿಸಿದೆ. ಹಿಜಾಬ್ ಜತೆಗೆ ಬಿಕಿನಿ ಪರ ಪ್ರಿಯಾಂಕಾ ವಾದ ಮಾಡಿದ್ದಾರೆ. ಆದರೆ ಇಲ್ಲಿರುವುದು ನಮ್ಮ ಧಿರಿಸಿನ ಪ್ರಶ್ನೆ ಅಲ್ಲ, ಶಾಲೆಯಲ್ಲಿ ಸಮವಸ್ತ್ರ ಧರಿಸುವ ಪ್ರಶ್ನೆ ಮಾತ್ರ ಎಂದು ತಿರುಗೇಟು ನೀಡಿದೆ.
ಯೂಸೂಫ್ ಮಲಾಲಾ ಟ್ವೀಟ್
ಪಾಕಿಸ್ಥಾನದ ಹೆಣ್ಣು ಮಕ್ಕಳ ಹಕ್ಕಿನ ಹೋರಾಟಗಾರ್ತಿ ಯೂಸೂಫ್ ಮಲಾಲಾ ಕೂಡಾ ಹಿಜಾಬ್ ವಿವಾದವನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.
“ಕಾಲೇಜು ನಮ್ಮನ್ನು ಅಧ್ಯಯನ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಲು ಒತ್ತಾಯಿಸುತ್ತಿದೆ”. ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಬರಲು ನಿರಾಕರಿಸುವುದು ಭಯಾನಕವಾಗಿದೆ. ಮಹಿಳೆಯರ ವಿರೋಧ ಮುಂದುವರಿಯುತ್ತದೆ, ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು ಎಂದು ಮಲಾಲಾ ಟ್ವೀಟ್ ಮಾಡಿದ್ದಾರೆ.
Whether it is a bikini, a ghoonghat, a pair of jeans or a hijab, it is a woman’s right to decide what she wants to wear.
This right is GUARANTEED by the Indian constitution. Stop harassing women. #ladkihoonladsaktihoon
— Priyanka Gandhi Vadra (@priyankagandhi) February 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.