ಸೀಟು ಶುಲ್ಕ ಅವ್ಯವಹಾರ, ತೆರಿಗೆ ವಂಚನೆ ಆರೋಪ : ರಾಜ್ಯದ 11 ಆಸ್ಪತ್ರೆಗಳಿಗೆ ಐಟಿ ಬಿಸಿ

Team Udayavani, Feb 18, 2021, 6:10 AM IST

ಸೀಟು ಶುಲ್ಕ ಅವ್ಯವಹಾರ, ತೆರಿಗೆ ವಂಚನೆ ಆರೋಪ : ರಾಜ್ಯದ 11 ಆಸ್ಪತ್ರೆಗಳಿಗೆ ಐಟಿ ಬಿಸಿ

ಬೆಂಗಳೂರು  : ವೈದ್ಯಕೀಯ ಸೀಟು ಶುಲ್ಕ ಅವ್ಯವಹಾರ ಮತ್ತು ತೆರಿಗೆ ವಂಚನೆ ಆರೋಪ ಸಂಬಂಧ ಮಂಗಳೂರು, ಬೆಂಗಳೂರು ಸಹಿತ ರಾಜ್ಯದ ಪ್ರತಿಷ್ಠಿತ 11 ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ನರ್ಸಿಂಗ್‌ ಕಾಲೇಜುಗಳು ಹಾಗೂ ಅವುಗಳ ಮಾಲಕರ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ದಿಲ್ಲಿ, ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಸುಮಾರು 250ಕ್ಕೂ ಅಧಿಕ ಅಧಿಕಾರಿಗಳ ತಂಡ ಬೆಳಗ್ಗೆ 7ರ ಸುಮಾರಿಗೆ ಬೆಂಗಳೂರು, ದಾವಣಗೆರೆ, ತುಮಕೂರು, ಮಂಗಳೂರು, ದೇವನಹಳ್ಳಿ ಸೇರಿ 70ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳ ಪ್ರವೇಶ, ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರಕಾರದ ನಿಗದಿತ ಶುಲ್ಕದ ಬಗ್ಗೆ ಪರಿಶೀಲಿಸಿದ್ದಾರೆ.
ಬೆಂಗಳೂರಿನ ಕೆಂಗೇರಿ, ದೇವನಹಳ್ಳಿ, ಹೆಸರಘಟ್ಟದಲ್ಲಿರುವ 3 ಕಾಲೇಜುಗಳು, ಮಂಗಳೂರಿನ 4, ತುಮಕೂರಿನ 1, ದಾವಣಗೆರೆಯ 3 ಮೆಡಿಕಲ್‌ ಕಾಲೇಜುಗಳ ಮೇಲೆ ದಾಳಿ ನಡೆಸಲಾಗಿದೆ.

ಅಲ್ಲದೆ ಮೆಡಿಕಲ್‌ ಕಾಲೇಜುಗಳ ಮಾಲಕರು, ನಿರ್ದೇಶಕರು, ಪಾಲುದಾರರು, ಈ ಸಂಸ್ಥೆಗಳಲ್ಲಿ ಉನ್ನತ ಹುದ್ದೆಯಲ್ಲಿದ್ದ ಸಿಬಂದಿ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ. ಮೂಲ್ಕಿಯ ಓರ್ವ ವೈದ್ಯರ ಮನೆಗೂ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಶೋಧ ಕಾರ್ಯ ಸಂದರ್ಭದಲ್ಲಿ ಆಸ್ಪತ್ರೆ, ಮೆಡಿಕಲ್‌ ಕಾಲೇಜುಗಳ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಈ ಸಂಸ್ಥೆಗಳು ಕೊರೊನಾ ಸಂದರ್ಭ ಅವ್ಯಹಾರ ನಡೆಸಿ ತೆರಿಗೆ ವಂಚಿಸಿವೆ ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಕೆಲವೆಡೆ ಲಕ್ಷಾಂತರ ರೂ. ನಗದು, ವಿದ್ಯಾರ್ಥಿಗಳ ಪ್ರವೇಶಾತಿ ದಾಖಲೆಗಳು ಮತ್ತು ಇತರ ಮಹತ್ವದ ದಾಖಲೆಗಳು ಸಿಕ್ಕಿವೆ ಎಂದು ಐಟಿ ಮೂಲಗಳು ತಿಳಿಸಿವೆ.

ಫ‌ುಟ್‌ಬಾಲ್‌ ಸ್ಟಿಕರ್‌ ಬಳಕೆ
ದಾಳಿಗಾಗಿ 250ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಸುಮಾರು 70 ಕಾರುಗಳನ್ನು ಮುಂಗಡವಾಗಿ ಕಾಯ್ದಿರಿಸಿಕೊಂಡಿದ್ದರು. ಎಲ್ಲ ಕಾರುಗಳಿಗೆ “ಇಂಟರ್‌ ನ್ಯಾಷನಲ್‌ ಫ‌ುಟ್ಬಾಲ್‌ ಚಾಂಪಿಯನ್‌ಶಿಪ್‌’ ಎಂಬ ಸ್ಟಿಕ್ಕರ್‌ ಅಂಟಿಸಿಕೊಂಡಿದ್ದವು.

ಟಾಪ್ ನ್ಯೂಸ್

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BCCI

BCCI; ಜ.12ಕ್ಕೆ ನೂತನ ಕಾರ್ಯದರ್ಶಿ, ಖಜಾಂಚಿ ಆಯ್ಕೆ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.