ಪ್ರಧಾನಿ ಮೋದಿಯಿಂದ ITPO ರಾಷ್ಟ್ರಾರ್ಪಣೆ
ಶೃಂಗೇರಿ ಮಠದ ಅರ್ಚಕರಿಂದ ಪೂಜಾ ಕೈಂಕರ್ಯ | ಜಿ-20 ಸಭೆಗೆ ಆತಿಥ್ಯ ವಹಿಸಲಿರುವ ಐಇಸಿಸಿ
Team Udayavani, Jul 27, 2023, 12:16 AM IST
ಹೊಸದಿಲ್ಲಿ: ದೇಶದ ಅತಿದೊಡ್ಡ ಸಭಾಂಗಣವಿರುವ ಸಂಕೀರ್ಣವೆಂಬ ಖ್ಯಾತಿಗೆ ಪಾತ್ರವಾಗಿರುವ, ನವೀಕೃತ ಐಟಿಪಿಒ (ಇಂಡಿಯಾ ಟ್ರೇಡ್ ಪ್ರಮೋಶನ್ ಆರ್ಗನೈಸೇಶನ್) ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದ್ದಾರೆ. ಪ್ರಗತಿ ಮೈದಾ ನದಲ್ಲಿರುವ ಐಟಿಪಿಒದಲ್ಲಿ ಹೋಮ-ಹವನಗಳು ನಡೆದಿದ್ದು, ಇದರಲ್ಲಿ ಮೋದಿ ಕೂಡ ಪಾಲ್ಗೊಂಡಿದ್ದರು. ಕರ್ನಾಟಕದ ಶೃಂಗೇರಿ ಮಠದ ಅರ್ಚಕರಿಂದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗಿದೆ. ಇದೇ ಸಂಕೀರ್ಣದಲ್ಲಿ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ20 ರಾಷ್ಟ್ರಗಳ ಸಭೆಯನ್ನು ನಡೆಸಲು ಯೋಜಿಸಲಾಗಿದೆ.
ಭಾರತ ಮಂಠಪಂ ಸಮರ್ಪಣಂ: 123 ಎಕ್ರೆಯಲ್ಲಿ ವ್ಯಾಪಿಸಿರುವ ಐಟಿಪಿಒ ಸಂಕೀರ್ಣದ ಭಾಗವಾಗಿ ನೂತನವಾಗಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಹಾಗೂ ಸಭಾಂಗಣ (ಐಇಸಿಸಿ)ವನ್ನು ನಿರ್ಮಿಸಲಾಗಿದೆ. ಭಾರತ ಮಂಠಪಂ ಎಂದು ಹೆಸರಿಸಲಾಗಿರುವ ಸಭಾಂಗಣವನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ದೇಶದಲ್ಲಿರುವ ಅತಿದೊಡ್ಡ ಸಭಾಂಗಣವೆಂಬ ಖ್ಯಾತಿಗೆ ಪಾತ್ರವಾಗಿರುವ ಈ ಭಾರತ ಮಂಠಪಂ ಸಿಡ್ನಿಯಲ್ಲಿರುವ ಒಪೆರಾ ಹೌಸ್‌ಗಿಂತಲೂ ವಿಸ್ತಾರವಾಗಿದೆ..
ವಿಶ್ವದ ಅಗ್ರ ಆರ್ಥಿಕತೆಯಲ್ಲಿ ಭಾರತ
ಐಟಿಪಿಒ .ಉದ್ಘಾಟಿಸಿ ಮಾತನಾಡಿದ ಮೋದಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ. ಮೂರನೇ ಬಾರಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಭಾರತ ವಿಶ್ವದ 3ನೇ ಅತೀದೊಡ್ಡ ಆರ್ಥಿ ಕತೆಗಳಲ್ಲಿ ಒಂದಾಗಲಿದೆ ಎಂದು ಹೇಳಿದ್ದಾರೆ. ಭಾರತ ದಲ್ಲಿ ಬಡತನ ನಿರ್ಮೂಲನೆ ಮಾಡುವ ಭರವಸೆಯನ್ನು ನೀಡಿದ್ದಾರೆ. ಇದೇ ವೇಳೆ ಭಾರತ ಪ್ರಜಾಪ್ರಭುತ್ವದ ತಾಯಿ ಎಂಬುದನ್ನು ಜಗತ್ತೇ ಒಪ್ಪಿಕೊಂಡಿದೆ ಎಂದಿದ್ದಾರೆ.
ಯುಗೇ ಯುಗೇ ಭಾರತ ಶೀಘ್ರ
ಪ್ರಗತಿ ಮೈದಾನ ಸಂಕೀರ್ಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸಾಕ್ಷಿ ಯಾಗುತ್ತಿದೆ. ದಿಲ್ಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕ, ಪೊಲೀಸರ ಸ್ಮಾರಕ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮಾರಕವಿದೆ. ಇವೆಲ್ಲವೂ ನಮ್ಮ ಹೆಮ್ಮೆ, ಇದರ ಜತೆಗೆ ಶೀಘ್ರವೇ ವಿಶ್ವದಲ್ಲೇ ಅತೀ ದೊಡ್ಡ ವಸ್ತು ಸಂಗ್ರಹಾಲಯವಾಗಿ ಯುಗೇ ಯುಗೇ ಭಾರತಂ ಎಂಬ ವಸ್ತು ಸಂಗ್ರಹಾಲಯವನ್ನು ದಿಲ್ಲಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.