ಶ್ರೇಯಸ್ ಅಯ್ಯರ್ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡರು: ಶರ್ಮಾ
Team Udayavani, Mar 14, 2022, 7:24 PM IST
ಬೆಂಗಳೂರು: ಶ್ರೇಯಸ್ ಅಯ್ಯರ್ ಅವರು ಟೆಸ್ಟ್ ಸರಣಿಯಲ್ಲಿ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶಗಳೊಂದಿಗೆ ಇನ್ನಷ್ಟು ಉತ್ತಮಗೊಳ್ಳುತ್ತಾರೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸೋಮವಾರ ಹೇಳಿದ್ದಾರೆ.
ಎರಡನೇ ಟೆಸ್ಟ್‌ನಲ್ಲಿ 238 ರನ್‌ಗಳ ಗೆಲುವಿನೊಂದಿಗೆ ಭಾರತವು ಸೋಮವಾರ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ ಬಳಿಕ ಮಾತನಾಡಿದ ಶರ್ಮಾ, ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರಂತಹ ದಿಗ್ಗಜರನ್ನು ತಂಡದಿಂದ ಕೈಬಿಟ್ಟ ನಂತರ ಆ ಜಾಗ ತುಂಬಲು ಶ್ರೇಯಸ್ ಅಯ್ಯರ್ ದೊಡ್ಡ ಜವಾಬ್ದಾರಿ ಹೊಂದಿದ್ದರು, ಸರಣಿಯಲ್ಲಿ ಅವರು ಅವಕಾಶ ಸದುಪಯೋಗ ಪಡಿಸಿಕೊಂಡಿದ್ದಾರೆ ಎಂದರು.
ರಿಷಭ್ ಪಂತ್, ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಸರಣಿಯ ಇತರ ಸ್ಟಾರ್ ಪ್ರದರ್ಶನಕಾರರಾಗಿದ್ದು,ಅವರ ಆಟ ನನಗೆ ತುಂಬಾ ಸಂತೋಷ ತಂದಿದೆ ಎಂದು ಟೆಸ್ಟ್‌ನಲ್ಲಿ ಮೊದಲ ಬಾರಿಗೆ ಭಾರತವನ್ನು ಮುನ್ನಡೆಸಿದ ಶರ್ಮಾ ಹೇಳಿದರು.
ಇದನ್ನೂ ಓದಿ : ಕರುಣರತ್ನೆ ಶತಕವೂ ಲಂಕನ್ನರನ್ನು ಕಾಪಾಡಲಿಲ್ಲ: ಸರಣಿ ವೈಟ್ ವಾಶ್ ಮಾಡಿದ ಭಾರತ
“ಇದು ಉತ್ತಮ ಆಟವಾಗಿದೆ, ನಾನು ಅದನ್ನು ವೈಯಕ್ತಿಕವಾಗಿ ಮತ್ತು ತಂಡವಾಗಿ ಆನಂದಿಸಿದೆ. ನಾವು ತಂಡವಾಗಿ ಕೆಲವು ವಿಷಯಗಳನ್ನು ಸಾಧಿಸಲು ಬಯಸಿದ್ದೇವು ಮತ್ತು ಅದನ್ನು ಮಾಡಿದ್ದೇವೆ ”ಎಂದರು.
ರಹಾನೆ ಬದಲಿಗೆ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದ ಶ್ರೇಯಸ್ ಅಯ್ಯರ್ ಕಡಿಮೆ ಸ್ಕೋರಿಂಗ್ ಮೊತ್ತದಲ್ಲಿ 92 ಮತ್ತು 67 ರನ್ ಗಳಿಸಿ ಗಮನ ಸೆಳೆದಿದ್ದರು. ಪೂಜಾರ ಬದಲಿಗೆ ಹನುಮ ವಿಹಾರಿ ಮೂರನೇ ಸ್ಥಾನದಲ್ಲಿ ಆಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.