ನಟಿ ಜಾಕ್ವೆಲಿನ್ ಗೆ 10 ಕೋಟಿ ರೂ ಮೌಲ್ಯದ ಉಡುಗೊರೆ ನೀಡಿದ ಸುಕೇಶ್: ವರದಿ
Team Udayavani, Dec 5, 2021, 12:42 PM IST
ಮುಂಬಯಿ : ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬಹುಕೋಟ್ಯಧಿಪತಿ ವಂಚಕ ಸುಕೇಶ್ ಚಂದ್ರಶೇಖರ್ ನಿಂದ 10 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ.
ಉಡುಗೊರೆಗಳಲ್ಲಿ 52 ಲಕ್ಷ ರೂಪಾಯಿಯ ಕುದುರೆ ಮತ್ತು ತಲಾ 9 ಲಕ್ಷ ಬೆಲೆಯ ನಾಲ್ಕು ಪರ್ಷಿಯನ್ ಬೆಕ್ಕುಗಳು ಉಡುಗೊರೆಯಲ್ಲಿ ಸೇರಿವೆ.
ಜಾರಿ ನಿರ್ದೇಶನಾಲಯ (ಇಡಿ) ಸುಕೇಶ್, ಪತ್ನಿ ನಟಿ ಲೀನಾ ಮರಿಯಾ ಪಾಲ್ ಮತ್ತು ಇತರ ಆರು ಜನರ ವಿರುದ್ಧ 200 ಕೋಟಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ.
ಈ ಹಿಂದೆ ಪ್ರಕರಣದಲ್ಲಿ ನಟಿಯರಾದ ಜಾಕ್ವೆಲಿನ್ ಫೆರ್ನಾಂಡಿಸ್ ಮತ್ತು ನೋರಾ ಫತೇಹಿ ಸಾಕ್ಷಿಗಳಾಗಿ ಇಡಿಯಿಂದ ಸಮನ್ಸ್ ಪಡೆದಿದ್ದರು.
ಚಾರ್ಜ್ ಶೀಟ್ ಪ್ರಕಾರ, ಸುಕೇಶ್ ಮತ್ತು ಜಾಕ್ವೆಲಿನ್ ಜನವರಿ 2021 ರಿಂದ ಪರಸ್ಪರ ಮಾತನಾಡುತ್ತಿದ್ದು, ಸುಕೇಶ್ ಜೈಲಿನಲ್ಲಿದ್ದಾಗಲೂ ತಮ್ಮ ಮೊಬೈಲ್ ಫೋನ್‌ನಲ್ಲಿ ಜಾಕ್ವೆಲಿನ್‌ನೊಂದಿಗೆ ಮಾತನಾಡುತ್ತಿದ್ದರು ”ಎಂದು ಇಂಡಿಯಾ ಟುಡೇ ವರದಿ ಹೇಳಿದೆ.
ನಟಿಯ ಒಡಹುಟ್ಟಿದವರಿಗೂ ಹಣವನ್ನು ಕಳುಹಿಸಿದ್ದಾನೆ ಎಂದು ಹೇಳಿಕೊಂಡಿದೆ.
ನೋರಾ ಫತೇಹಿ ಪಡೆದ ಉಡುಗೊರೆಗಳ ಮೇಲೆ ಬೆಳಕು ಚೆಲ್ಲಿದ ಇಂಡಿಯಾ ಟುಡೇ ಪಡೆದ ಚಾರ್ಜ್ ಶೀಟ್, “ನೋರಾ ಫತೇಹಿಗೆ ಸುಕೇಶ್ ಅವರು 1 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ BMW ಕಾರು ಮತ್ತು ಐಫೋನ್ ಉಡುಗೊರೆಯಾಗಿ ನೀಡಿದ್ದಾರೆ” ಎಂದು ಹೇಳಿದೆ.
ಕೆಲ ಸಮಯದ ಹಿಂದೆ ಜಾಕ್ವೆಲಿನ್ ಅವರು ಸುಕೇಶ್ ಕೆನ್ನೆಗೆ ಮುತ್ತಿಟ್ಟ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು, ಇಬ್ಬರೂ ಸಂಬಂಧದಲ್ಲಿದ್ದಾರೆ ಎಂದು ಭಾರಿ ಸುದ್ದಿಯಾಗಿತ್ತು.
ಕೈಗಾರಿಕೋದ್ಯಮಿಯೊಬ್ಬರ ಪತ್ನಿಯಿಂದ ಸುಮಾರು 200 ಕೋಟಿ ಸುಲಿಗೆ ಮಾಡಿ ಹವಾಲಾ ಖಾತೆಯ ಮೂಲಕ ಹಣವನ್ನು ಲಾಂಡರಿಂಗ್ ಮಾಡಿ ಮತ್ತು ಅದನ್ನು ಕ್ರಿಪ್ಟೋಕರೆನ್ಸಿ ಖರೀದಿಸಲು ಬಳಸಿದ ಆರೋಪ ಸುಕೇಶ್ ಮೇಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.