ರಾಜ್ಯದಲ್ಲಿ ಕೈಗಾರಿಕೆ ನಡೆಸುವ ಕುರಿತು ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ : ಶೆಟ್ಟರ್
Team Udayavani, Jun 8, 2021, 7:12 PM IST
ಬೆಂಗಳೂರು : ಲಸಿಕೆ ಪಡೆದುಕೊಂಡಂತಹ ಕಾರ್ಮಿಕರೊಂದಿಗೆ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ .
ಇಂದು ಬೆಂಗಳೂರಿನಲ್ಲಿ ಎಫ್ ಐ ಸಿ ಸಿ ಐ ವತಿಯಿಂದ ಆಯೋಜಿಸಿದ್ದ ವೇಬಿನಾರ್ ನಲ್ಲಿ ಭಾಗವಹಿಸಿ ಕೈಗಾರಿಕೋದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು ಕೋವಿಡ್ ಎರಡನೇ ಅಲೆಯಿಂದಾಗಿ ರಾಜ್ಯದ ಪರಿಸ್ಥಿತಿ ಬಹಳ ಬಿಗಡಾಯಿಸಿತ್ತು. ಈ ಹಿನ್ನಲೆಯಲ್ಲಿ ಲಾಕ್‌ಡೌನ್ ನಂತಹ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು. ಲಾಕ್‌ಡೌನ್‌ನಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಲ್ಲದೆ, ದೇಶಾದ್ಯಂತ ಲಸಿಕಾ ಕಾರ್ಯ ವೇಗ ಪಡೆದುಕೊಳ್ಳುತ್ತಿದ್ದು, ಕೈಗಾರಿಕಾ ಸಂಸ್ಥೆಗಳು ತಮ್ಮ ಕಾರ್ಮಿಕರು ಮತ್ತು ಅವಲಂಬಿತರಿಗೆ ಲಸಿಕೆ ದೊರಕಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದು ಶ್ಲಾಘನೀಯ ಕಾರ್ಯವಾಗಿದ್ದು, ಲಸಿಕೆಯನ್ನು ಪಡೆದುಕೊಂಡಿರುವ ಕಾರ್ಮಿಕರೊಂದಿಗೆ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಳೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಕೈಗಾರಿಕೆಗಳ ಎಲ್ಲಾ ಕ್ಷೇತ್ರಗಳ ಮೇಲೆ ಲಾಕ್ ಡೌನ್ ಪರಿಣಾಮವನ್ನು ಬೀರಿದೆ. ಇದರ ಬಗ್ಗೆ ಅಧ್ಯಯನ ಮಾಡುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯ ವತಿಯಿಂದ ಪ್ರತಿ ಕೈಗಾರಿಕಾ ಕ್ಷೇತ್ರಕ್ಕೂ ಸಂಬಂಧಿಸಿದಂತೆ ಹಾನಿ ಮೌಲ್ಯಮಾಪನ ಪ್ರಕ್ರಿಯೆಯನ್ನು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.
ಇದನ್ನೂ ಓದಿ :ಸಿಎಂ ಬದಲಾವಣೆಯ ಬಗ್ಗೆ ಸಹಿ ಸಂಗ್ರಹದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ : ಪಾಟೀಲ್
ಅಲ್ಲದೆ, ಕೇಂದ್ರ ಹಣಕಾಸು ಇಲಾಖೆಯೊಂದಿಗೆ ಸತತ ಸಂಪರ್ಕದಲ್ಲಿದ್ದು ಎಂಎಸ್‌ಎಂಇ ಹಾಗೂ ಇತರೆ ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮಗಳ ಘೋಷಣೆಯ ನಿರೀಕ್ಷೆಯಲ್ಲಿದ್ದೇವೆ. ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ನಡೆಯಲಿರುವ ಸಭೆಯಲ್ಲಿ ರಾಜ್ಯ ಸರಕಾರದ ವತಿಯಿಂದ ಆಗಬೇಕಾಗಿರುವಂತಹ ಸಡಲಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ರಾಜಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಎಫ್ ಐ ಸಿ ಸಿ ಐ ಅಧ್ಯಕ್ಷ ರಾದ ಕೆ ಉಲ್ಲಾಸ್ ಕಾಮತ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ ಸೇರಿದಂತೆ ನೂರಾರು ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.