ಜೈ ರಿಚರ್ಡ್ಸನ್ ಐಪಿಎಲ್‌ನಿಂದ ಹೊರಕ್ಕೆ
Team Udayavani, Mar 12, 2023, 7:42 AM IST
ಸಿಡ್ನಿ: ಆಸ್ಟ್ರೇಲಿಯದ ವೇಗಿ ಜೈ ರಿಚರ್ಡ್ಸನ್ ಅವರು ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದು ಈ ವರ್ಷದ ಐಪಿಎಲ್‌ನಿಂದ ಹೊರಗುಳಿಯಲಿದ್ದಾರೆ. ರಿಚರ್ಡ್ಸನ್ ಮಾ.31ರಿಂದ ಆರಂಭವಾಗುವ ಐಪಿಎಲ್‌ನಲ್ಲಿ ದಾಖಲೆ ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಪರ ಆಡಬೇಕಿತ್ತು. ಗಾಯದ ಸಮಸ್ಯೆಯಿಂದಾಗಿ ಅವರು ಭಾರತ ವಿರುದ್ಧ ಮಾ.17ರಿಂದ ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ಹೊರಗುಳಿಯಲಿದ್ದಾರೆ.
ಮಂಡಿರಜ್ಜು ಗಾಯದ ಸಮಸ್ಯೆಗಾಗಿ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ ಕೆಲವು ವಾರಗಳ ವಿಶ್ರಾಂತಿಯ ಅಗತ್ಯವಿದೆ. ಗಾಯದ ಸಮಸ್ಯೆ ಕ್ರಿಕೆಟ್‌ನ ದೊಡ್ಡ ಭಾಗವಾಗಿರುವುದು ಸತ್ಯ ಎಂದವರು ಪ್ರತಿಕ್ರಿಯೆ ನೀಡಿದರು. 26ರ ಹರೆಯದ ರಿಚರ್ಡ್ಸನ್ ಆಸ್ಟ್ರೇಲಿಯ ಪರ ಮೂರು ಟೆಸ್ಟ್, 15 ಏಕದಿನ ಮತ್ತು 18 ಟಿ20 ಪಂದ್ಯಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.