ಜೈನಮುನಿ ಹತ್ಯೆ ಪ್ರಕರಣ CBI ಗೆ ವಹಿಸಲಿ: ಡಾ| ಹೆಗ್ಗಡೆ


Team Udayavani, Jul 14, 2023, 7:48 AM IST

VEERENDRA HEGGADE

ಮಂಡ್ಯ: ಬೆಳಗಾವಿಯ ಜೈನಮುನಿಯ ಹತ್ಯೆ ಪ್ರಕರಣವನ್ನು ಸರಕಾರ ಸಿಬಿಐಗೆ ವಹಿಸಿದರೆ ತನಿಖೆ ಚುರುಕುಗೊಳ್ಳಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳ ಧರ್ಮಾಧಿ ಕಾರಿ ಡಾ| ವೀರೇಂದ್ರ ಹೆಗ್ಗಡೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನಮುನಿ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರಕಾರದ ತನಿಖೆ ನಡೆಯುತ್ತಿದೆ. ನಮ್ಮ ಪ್ರಕಾರ ತನಿಖೆ ಸರಿಯಾಗಿ ನಡೆಯುತ್ತಿದೆ. ಇನ್ನೂ ಹೆಚ್ಚಿನ ತನಿಖೆ ಆದರೆ ಒಳ್ಳೆಯದು ಎಂದರು. ಜೈನಮುನಿ ಹತ್ಯೆ ಪ್ರಕರಣದ ತನಿಖೆಯಲ್ಲಿ ಹೊಸ ವಿಷಯಗಳು ಹೊರ ಬರುತ್ತಿವೆ. ಸಿಬಿಐ ತನಿಖೆಗೆ ಕೊಟ್ಟರೆ ಇನ್ನೂ ಹೆಚ್ಚಿನ ವಿಷಯಗಳು ಹೊರ ಬರಲಿವೆ ಎಂದು ಹೇಳಿದರು.

ಸಿಎಂಗೆ ಹೆಗ್ಗಡೆ ಅಭಿನಂದನೆ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅಭಿನಂದನೆ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ 14ನೇ ಬಜೆಟ್‌ ಮಂಡಿಸಿದ ನಿಮಗೆ ಅಭಿನಂದನೆಗಳು. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ ಎಂದು ಶ್ಲಾ ಸಿದರು.

ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ. ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆ. ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.