ಕಾಶ್ಮೀರ: ಸಿಆರ್ಪಿಎಫ್ ಯೋಧನನ್ನು ಹತ್ಯೆಗೈದಿದ್ದ ಉಗ್ರ ಸಹಿತ ಇಬ್ಬರ ಬಂಧನ
Team Udayavani, Mar 13, 2022, 1:21 PM IST
ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಶನಿವಾರ ಕರ್ತವ್ಯ ನಿರತ ಸಿಆರ್ಪಿಎಫ್ ಯೋಧರೊಬ್ಬರನ್ನು ಹತ್ಯೆಗೈದು ಪರಾರಿಯಾಗಿದ್ದ ಉಗ್ರನನ್ನು ಬಂಧಿಸಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮಹಾ ನಿರೀಕ್ಷಕ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಆರೋಪಿಯಿಂದ ಅಪರಾಧ ಕೃತ್ಯಕ್ಕೆ ಬಳಸಿದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ.
“ನಾವು ಸಿಆರ್ಪಿಎಫ್ ಸಿಬ್ಬಂದಿಯ ಹಂತಕನನ್ನು ಬಂಧಿಸಿದ್ದೇವೆ. ಆತನಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದಕ ಅಪರಾಧದ ಸಂದರ್ಭದಲ್ಲಿ ಅವನೊಂದಿಗೆ ಸಹಕರಿಸಿದ ಇನ್ನೊಬ್ಬ ಭೂಗತವಾಗಿದ್ದ ಉಗ್ರ ಸಂಘಟನೆಯ ಬೆಂಬಲಿಗನನ್ನೂ ಸಹ ಬಂಧಿಸಲಾಗಿದೆ. ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಬಿದ್ ನಿರ್ದೇಶನದ ಮೇರೆಗೆ ಈ ಅಪರಾಧ ಎಸಗಲಾಗಿದೆ” ಎಂದು ಐಜಿಪಿ ತಿಳಿಸಿದ್ದಾರೆ.
ಶನಿವಾರ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್ಪಿಎಫ್ ಯೋಧ, ಶೋಪಿಯಾನ್ ನಿವಾಸಿ ಮುಖ್ತಾರ್ ಅಹ್ಮದ್ ದೋಹಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.