ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಶಿಸ್ತುಕ್ರಮ? : ಸಾ.ರಾ. ಮಹೇಶ್ ಸುಳಿವು


Team Udayavani, Dec 15, 2021, 5:44 PM IST

sa-ra-mahesh

ಮೈಸೂರು : ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದ ಮರುದಿನವೇ ಜೆಡಿಎಸ್ ಶಾಸಕ ಸಾ ರಾ ಮಹೇಶ್ ಮೈಸೂರಿನಲ್ಲಿ ಬುಧವಾರ ದಿಢೀರ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ.

ಮೈಸೂರಿನಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಸ್ ಅಭ್ಯರ್ಥಿಗೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳು ಬಂದಿವೆ.ಈ ಮೂಲಕ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬುದನ್ನು ಜೆಡಿಎಸ್ ಕಾರ್ಯಕರ್ತರು ಸಾಬೀತು ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ, ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರಿನಲ್ಲೇ ಇದ್ದುಕೊಂಡು ಪ್ರಚಾರ ನಡೆಸಿದ್ದರು.ಇದೆಲ್ಲದರ ನಡುವೆಯೂ ಜೆಡಿಸ್ ಅಭ್ಯರ್ಥಿ ಕಳೆದ ಬಾರಿಗಿಂತ ಹೆಚ್ಚಿನ ಮತ ಪಡೆದು ಆಯ್ಕೆಯಾಗಿದ್ದಾರೆ. ಜೆಡಿಸ್ ಪ್ರಬಲವಾಗಿದೆ ಎಂಬುದನ್ನು ಈ ಚುನಾವಣೆ ಸಾಬೀತು ಪಡಿಸಿದೆ‌ ಎಂದರು.

ನನ್ನನ್ನು ಸೇರಿದಂತೆ ನಮಗೆ ಜೆಡಿಎಸ್ ಅನಿವಾರ್ಯವೇ ಹೊರತು, ಜೆಡಿಎಸ್ ಗೆ ನಾವು ಅನಿವಾರ್ಯವಲ್ಲ ಎಂಬುದನ್ನು ಈ ಚುನಾವಣೆ ಫಲಿತಾಂಶ ತೋರಿಸಿದೆ ಎಂದರು.

ಈಗಲಾದರೂ ಪಕ್ಷದಲ್ಲಿದ್ದುಕೊಂಡು ವಿರೋಧಿ ಕೆಲಸ ಮಾಡುತ್ತಿರುವವರು ಚಿಂತನೆ ಮಾಡಿ, ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ. ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ನಾಯಕರುಗಳು ಎಷ್ಟೇ ನೋವು ಕೊಟ್ಟರೂ ಅದನ್ನು ಕಾರ್ಯಕರ್ತರು ಸಹಿಸಿಕೊಂಡಿದ್ದಾರೆ. ಹಾಗಾಗಿ ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ನಾಯಕರು ಅರ್ಥ ಮಾಡಿಕೊಳ್ಳಿ.ನಾವು ನಿಮ್ಮನ್ನು ನಾಯಕರೆಂದು ಒಪ್ಪಿಕೊಂಡಿದ್ದೇವೆ. ನೀವು ಇತರರಿಗೆ ಮಾರ್ಗದರ್ಶನ ನೀಡಿ.ನೀವು ನಮ್ಮ ಪಕ್ಷದ ಚಿನ್ನೆ, ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೀರಾ. ಹಾಗಾಗಿ ನೀವು ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಿ.ಅವರ ಮನಸ್ಸು ಈಗಲಾದರೂ ಬದಲಾಗಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದು ಶಾಸಕ ಜಿ ಟಿ ದೇವೆಗೌಡರ ಹೆಸರು ಹೇಳದೇ ಟಾಂಗ್ ನೀಡಿದರು.

ಕುಂಕುಮ ಕೊಟ್ಟರು, ದುಡ್ಡು ಕೊಟ್ಟರು ಅಂತಾ ನಮ್ಮ‌ ಶಾಸಕರೇ ಹೇಳಿದ್ದಾರೆ.ಹಾಗಾದರೆ ನೀವೇನೂ ಕಳ್ಳೆಪುರಿ ಕೊಟ್ರಾ? ಜೆಡಿಎಸ್ ಗೆ ಯಾರು ಅನಿವಾರ್ಯ ವಲ್ಲ. ಜೆಡಿಎಸ್ ನಮಗೆ ಅನಿವಾರ್ಯ. ನಮಗೆ ಈಗಲೂ ನಿಮ್ಮ ಮೇಲೆ ಗೌರವವಿದೆ. ಈಗಲೂ ನಮಗೆ ಅವರೇ ನಾಯಕರು. ಎಷ್ಟೆಲ್ಲಾ ನೋವು ಕೊಟ್ಟಿದ್ದಾರೆ. ಆದರೂ ಅವರನ್ನು ನಾಯಕರು ಅಂತಾ ಒಪ್ಪಿಕೊಂಡಿದ್ದೇವೆ. ಪಕ್ಷದ ಕಾರ್ಯಕರ್ತರ ದುಡಿಮೆಯಿಂದ ನೀವು ಶಾಸಕರಾಗಿರೋದು. ನಿಮ್ಮ ಅವಧಿ ಮುಗಿಯುವವರೆಗಾದರೂ ನೀವು ಪಕ್ಷದ ಪರವಾಗಿ ಇರಿ ಎಂದು ಜಿ ಟಿ ದೇವೇಗೌಡ ಹೆಸರು ಹೇಳದೆ ತಿರುಗೇಟು ಕೊಟ್ಟರು.

ಎರಡೂ ರಾಷ್ಟ್ರೀಯ ಪಕ್ಷಗಳು ಸೇರಿಕೊಂಡು ಜೆಡಿಎಸ್ ಮುಗಿಸುವ ಕೆಲಸ ಮಾಡುತ್ತಿವೆ. ಈಗಿನ ಪರಿಸ್ಥಿತಿಯಲ್ಲಿ ಇಬ್ಬರಿಗೂ ನಾವೇ ಅನಿವಾರ್ಯ ಅನ್ನುವುದು ಗೊತ್ತಾಗಿದೆ. ನಾವು ಯಾರನ್ನು ಬೆಂಬಲಿಸುತ್ತೇವೋ ಅವರಿಗೆ ಬಹುಮತ ಸಿಗಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲೂ ಇದೆ ರೀತಿ ಆಗಲಿದೆ. ಆದರೆ ನಾವು ಯಾರ ಜೊತೆಯೂ ಹೋಗುವುದಿಲ್ಲ. ಇಬ್ಬರಿಂದಲೂ ಅಂತರ ಕಾಯ್ದುಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.

ಹಿಂದೆ ನಡೆದ ಚುನಾವಣೆಗಳು, ಈಗ ನಡೆದ ಎಂಎಲ್‌ಸಿ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದ್ದಾರೆ. ನಮ್ಮಲ್ಲಿ ಇದ್ದುಕೊಂಡು ನಮ್ಮ‌ ವಿರುದ್ಧವೇ ಕೆಲಸ ಮಾಡಿದ್ದಾರೆ. ಇದನ್ನು ಪಕ್ಷ ಪರಿಗಣಿಸಿದೆ. ಈಗಾಗಲೇ ಪಕ್ಷದ ವರಿಷ್ಠರು ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಆ ತೀರ್ಮಾನ ಏನು ಅನ್ನೋದು ಇನ್ನು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.ಇದುವರೆಗೂ ಅವರನ್ನು ನಮ್ಮ ನಾಯಕರು ಅನ್ನುತ್ತಿದ್ದೆ‌.ಈಗ ಶಾಸಕರು ಅನ್ನುತ್ತೇನೆ. ಎಂದು ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಶಿಸ್ತುಕ್ರಮದ ಕುರಿತು ಸಾ ರಾ ಮಹೇಶ್. ಸುಳಿವು ನೀಡಿದರು.

ವಿಜೇತ ಅಭ್ಯರ್ಥಿ ಸಿ ಎನ್ ಮಂಜೇಗೌಡ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದಾರೆ.ಚುನಾವಣೆಯ ವಿಚಾರಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ‌ ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Voting in Delhi today: A triangular battle for the Capital

Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.